ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Prajwal Revanna
Published on

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್​.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ಹಾಗೂ ಆಕೆಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ರೇವಣ್ಣ ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿ ವಿಚಾರಣೆ ನಡೆಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net