ಪೂರ್ವಭಾವಿ ಸಭೆ ಮುಂದೂಡಿಕೆ

ಬೈಲಹೊಂಗಲ: ತಾಲೂಕಿನ ಬೆಳವಡಿ ಗ್ರಾಮದಲ್ಲಿ ಫೆ.28 ಹಾಗೂ ಮಾರ್ಚ್ 1ರಂದು ಸರ್ಕಾರದಿಂದ ಆಚರಿಸಲಿರುವ ಬೆಳವಡಿ ಮಲ್ಲಮ್ಮ ಉತ್ಸವದ ಅಂಗವಾಗಿ ಶಾಸಕ, ಸಂಸದೀಯ ಕಾರ್ಯದರ್ಶಿ ಮಹಾಂತೇಶ ಕೌಜಲಗಿ ಉಪಸ್ಥಿತಿ ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಫೆ.16ರಂದು ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನು ಫೆ.18ರಂದು 3.30ಕ್ಕೆ ಬೆಳವಡಿ ಗ್ರಾಮದ ರಾಣಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಕರೆಯಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆ ನೀಡಬೇಕು ಎಂದು ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದ್ದಾರೆ.