

ಹೆಬ್ರಿ: ಬೈರಂಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಪ್ರಸಾದ್ ಮಲ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ಗ್ರಾಮಸಭೆ ನಡೆಯಿತು. ಗ್ರಾಪಂ ಅಧ್ಯಕ್ಷ ಪ್ರಸಾದ್ ಮಲ್ಯ ಮಾತನಾಡಿ, ವಿವಿಧ ಇಲಾಖೆಗಳ ಸಮನ್ವಯತೆ ಸಾಧಿಸಿ, ಗ್ರಾಮಸ್ಥರ ಸಹಕಾರದೊಂದಿಗೆ ಗ್ರಾಮದ ಅಭಿವೃದ್ಧಿಗೆ ಪೂರಕ ಕೆಲಸ ಅನುಷ್ಠಾನಗೊಳಿಸಲು ಪಂಚಾಯಿತಿ ಸದಾ ಬದ್ಧವಾಗಿದೆ ಎಂದರು.
ಉಡುಪಿ ಸಮಾಜ ಕಲ್ಯಾಣ ಇಲಾಖೆ ವಿಜಯಲಕ್ಷ್ಮೀ ನೋಡಲ್ ಅಧಿಕಾರಿಯಾಗಿದ್ದರು. ಉಪಾಧ್ಯಕ್ಷೆ ಅಮ್ಮಣ್ಣಿ ಶೆಟ್ಟಿ, ಗ್ರಾಪಂ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಒ ಸುಮನಾ ಕಾರ್ಯಕ್ರಮ ನಿರೂಪಿಸಿದರು.