More

    ಮಂಗಳೂರು | ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರಿಂದ ದಾಳಿ; ಅಶ್ಲೀಲ ವರ್ತನೆ ಆರೋಪ

    ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ನಗರದ ಮರೋಳಿ ಎಂಬಲ್ಲಿ ನಡೆದಿದೆ. ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ಹೋಳಿ ಆಚರಣೆ ನಡೆಯುತ್ತಿತ್ತು.

    ಡಿಜೆ ಪಾರ್ಟಿ ವೇಳೆ ಯುವಕ-ಯುವತಿಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು. ಈ ವೇಳೆ ಅಶ್ಲೀಲ ವರ್ತನೆ ನಡೆದಿದೆ. ಅಲ್ಲದೆ ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರು 4% ಮೀಸಲಾತಿ ಪಡೆದುಕೊಂಡಿದ್ದರು! ಪ್ರತಾಪ್ ಸಿಂಹ

    ಡಿಜೆ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ದೌಡಾಯಿಸಿರುವ ಭಜರಂಗದಳ ಕಾರ್ಯಕರ್ತರು ಹೋಳಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದು ದಾಂಧಲೆ ಮಾಡಿದ್ದಾರೆ. ಇದರಿಂದ ಕಾರ್ಯಕ್ರಮ ಆಯೋಜಕರು ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

    ಭಜರಂಗದಳ ಕಾರ್ಯಕರ್ತರು ಆಯೋಜಕರು ಮತ್ತು ಕೆಲವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿದ್ದು, ಭಜರಂಗದಳ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮನೆಯವರಿಂದ ಪ್ರೀತಿ ನಿರಾಕರಣೆ; 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts