More

    ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ: ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಪ್ರಬಲ ಅಸ್ತ್ರ

    ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹೊರ ತಂದಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಭರವಸೆ ನೀಡಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.

    ಕಾಂಗ್ರೆಸ್​ ವಿರುದ್ಧ ಚುನಾವಣೆಯಲ್ಲಿ ಇದನ್ನೇ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹಿಂದು ವಿರೋಧಿ ಕಾಂಗ್ರೆಸ್ ಎಂದು ಪ್ರಚಾರ ಮಾಡಲು ಬಿಜೆಪಿ ತಯಾರಿ ನಡೆಸಿದೆ. ಜಜರಂಗದಳ ನಿಷೇಧ ವಿಚಾರವನ್ನೇ ಕಾಂಗ್ರೆಸ್ ವಿರುದ್ಧ ಬಳಸುವಂತೆ ಬಿಜೆಪಿ ಮುಖಂಡರಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

    ಇದನ್ನೂ ಓದಿ: ಅಂಚೆ ಮತ ಚಲಾಯಿಸುವಾಗ ಗೌಪ್ಯತೆಯಿರಲಿ: ಸಾಮಾನ್ಯ ವೀಕ್ಷಕ ತನ್ಮಯ್ ಚಕ್ರಭರ್ತಿ ಸೂಚನೆ

    ಸಿಡಿದೆದ್ದ ಹಿಂದು ಸಂಘಟನೆಗಳು

    ಅಧಿಕಾರಕ್ಕೆ ಬಂದರೆ ಬಜರಂಗದಳದ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿರುವ ಕಾಂಗ್ರೆಸ್​ ವಿರುದ್ಧ ಹಿಂದು ಸಂಘಟನೆಗಳು ಸಿಡಿದೆದ್ದಿವೆ. ಕಾಂಗ್ರೆಸ್ ಪ್ರಣಾಳಿಕೆ ಖಂಡನೀಯವಾಗಿದೆ. ಹಿಂದು ಧರ್ಮ, ದೇವಸ್ಥಾನ, ಹಿಂದು ಯುವತಿಯರನ್ನು ರಕ್ಷಣೆ ಮಾಡುವ ಹಿಂದುತ್ವವಾದಿ ಸಂಘಟನೆ ಭಜರಂಗದಳವಾಗಿದೆ. ಇದು ಕಾನೂನು ಚೌಕಟ್ಟಿನಲ್ಲಿ ರಚನೆ ಆಗಿದೆ. ಕಾಂಗ್ರೆಸ್ ಹಿಂದು ವಿರೋಧಿ ಮಾನಸಿಕತೆ ಇಲ್ಲಿ ಎದ್ದು ಕಾಣಿಸುತ್ತಿದೆ. ಮುಸ್ಲಿಂ ಒಲೈಕೆಗಾಗಿ ಕಾಂಗ್ರೆಸ್ ಪಕ್ಷ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಇಂತಹ ಹಿಂದು ವಿರೋಧಿ, ರಾಷ್ಟ್ರ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಅಂತ ಹಿಂದು ಮುಖಂಡ ಮೋಹನ್ ಗೌಡ ಆಗ್ರಹಿಸಿದ್ದಾರೆ.

    ಬಿಜೆಪಿ ಕೆಂಡಾಮಂಡಲ

    ಬಜರಂಗದಳ ನಿಷೇಧ ಭರವಸೆ ಬಗ್ಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಅಸ್ಸಾಂ ಮುಖ್ಯಮಂತ್ರಿ ಬಿಸ್ವಾಂತ್​ ಶರ್ಮ, ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಅನೇಕರು ಕಾಂಗ್ರೆಸ್​ ಪ್ರಣಾಳಿಕೆ ವಿರುದ್ಧ ಧ್ವನಿ ಎತ್ತಿದ್ದಾರೆ. ಪಿಎಫ್​ಐ ಸಂಘಟನೆಯನ್ನು ಕೇಂದ್ರ ಸರ್ಕಾರ ಬ್ಯಾನ್​ ಮಾಡಿದ್ದಕ್ಕೆ ಹತಾಶರಾಗಿ ಕಾಂಗ್ರೆಸ್​ ಹಿಂದು ಸಂಘಟನೆ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ಆಮಿಷಕ್ಕೊಳಗಾಗದೇ ಅರ್ಹರೆಲ್ಲರೂ ಮತದಾನ ಮಾಡಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ

    ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಏನಿದೆ?

    ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಚಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಬಜರಂಗದಳ ಮತ್ತು ಪಿಎಫ್ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್​ ಹೇಳಿದೆ. (ದಿಗ್ವಿಜಯ ನ್ಯೂಸ್​)

    ನಾನು ಬಜರಂಗದಳ ಕಾರ್ಯಕರ್ತೆ, ತಾಕತ್ತಿದ್ದರೆ ನನ್ನನ್ನು ಬಂಧಿಸಿರಿ: ಕಾಂಗ್ರೆಸ್​ಗೆ ಶೋಭಾ ಕರಂದ್ಲಾಜೆ ಸೆಡ್ಡು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts