

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಮಂಡ್ಯ ಜಿಲ್ಲೆಯ ಚಿನ್ನ ಗ್ರಾಮದ ನಾಗೇಶ ಶೆಟ್ಟಿ(65) ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿ ಮೃತ ಪಟ್ಟಿರುವ ಘಟನೆ ಬಸ್ರೂರು ಮೂರುಕೈ ಸಮೀಪ ಮನೆಯೊಂದರಲ್ಲಿ ನಡೆದಿದೆ.
ಕೋಟೇಶ್ವರದಲ್ಲಿ ಬೇಕರಿ ವ್ಯಾಪಾರ ಮಾಡಿಕೊಂಡಿದ್ದ ನಾಗೇಶ ಶೆಟ್ಟಿ ವಡೇರ ಹೋಬಳಿ ಗ್ರಾಮದ ಬಸ್ರೂರು ಮೂರುಕೈ ಸಮೀಪ ವಿವೇಕ ಆಸ್ಪತ್ರೆ ಬಳಿ ಇರುವ ಬಾಡಿಗೆ ಮನೆಯಲ್ಲಿ 2 ವರ್ಷಗಳಿಂದ ಒಬ್ಬರೇ ವಾಸಿಸುತ್ತಿದ್ದರು. ಆ.6ರಂದು ಕೋಟೇಶ್ವರದ ಬುದ್ಧರಾಜ ಶೆಟ್ಟಿ ಅನಾರೋಗ್ಯದಿಂದ ಬಳಲುತ್ತಿದ್ದ ನಾಗೇಶ ಅವರಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟಿದ್ದರು. ಹೆಚ್ಚಿನ ಚಿಕಿತ್ಸೆ ಬಗ್ಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ಹೋಗಲು ನಾಗೇಶ ಶೆಟ್ಟಿ ಅವರಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದಿದ್ದಾಗ ಮನೆಗೆ ಹೋಗಿ ಪರಿಶೀಲಿಸಿವಾಗ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡು ಬಂದಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.