More

    ಬಾಲಾಜಿ ಕಾರ್ಖಾನೆಗೆ ನಾಳೆ ಬೀಗ

    ಹೂವಿನಹಿಪ್ಪರಗಿ: ಸರ್ಕಾರದ ಆದೇಶದಂತೆ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಗೊಳಿಸಲು ಆಗ್ರಹಿಸಿ ಅ.29ರಂದು ಬೆಳಗ್ಗೆ 10.30ಕ್ಕೆ ಮುದ್ದೇಬಿಹಾಳ ತಾಲೂಕಿನ ಯರಗಲ್ಲ ಬಳಿಯ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಬೀಗ ಜಡಿದು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ತಾಳಿಕೋಟೆ ತಾಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಹಳ್ಳಿ ತಿಳಿಸಿದ್ದಾರೆ.

    ಈ ಕುರಿತು ಜಂಟಿ ಪ್ರಕಟಣೆ ನೀಡಿರುವ ಅವರು, ಪಂಜಾಬ್ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ರೈತರಿಗೆ ಪ್ರತಿ ಟನ್ ಕಬ್ಬಿಗೆ 3,800 ರೂ.ವರೆಗೆ ಕೊಡುತ್ತಾರೆ. ಆದರೆ, ಮುದ್ದೇಬಿಹಾಳ, ಬಸವನಬಾಗೇವಾಡಿ, ತಾಳಿಕೋಟೆಯ ತಾಲೂಕಿನ ರೈತರು ಬಾಲಾಜಿ ಕಾರ್ಖಾನೆಗೆ ಕಬ್ಬು ಪೂರೈಸುತ್ತಿದ್ದು, ಕಾರ್ಖಾನೆಯವರು ಪ್ರತಿ ಟನ್ ಕಬ್ಬಿಗೆ 2,502 ರೂ. ಮಾತ್ರ ನೀಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ.

    ಆದ್ದರಿಂದ ಅಂದು ಧರಣಿ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts