More

    ಸಮತೋಲನ ಜಲಾಶಯಕ್ಕೆ ಅನುದಾನ ನೀಡಲಿ

    ರಾಯಚೂರು: ರಾಜ್ಯದಲ್ಲಿ ಕೃಷಿ ಬಜೆಟ್ ಪ್ರತ್ಯೇಕವಾಗಿ ಮಂಡಿಸಿ ಒಂದು ಲಕ್ಷ ಕೋಟಿ ರೂ. ಅನುದಾನ ಮೀಸಲಿಡಬೇಕು. ರೈತರ ಸಾಲ ಮನ್ನಾ ಮಾಡಬೇಕೆಂಬುದು ಸೇರಿ ವಿಧ ಬೇಡಿಕೆಗಳನ್ನು ಈಡೇರಿಸುವಂತೆ ಭಾರತೀಯ ಕಿಸಾನ್ ಸಂಘ ಒತ್ತಾಯಿಸಿದೆ.

    ಸಂಘದ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಮಹ್ಮದ್ ಆಸೀಫ್‌ಗೆ ಮಂಗಳವಾರ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿದ್ದು, ರೈತರು ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

    ರೈತ ಜೀವನಾಡಿಯಾದ ತುಂಗಭದ್ರಾ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದ ಹೂಳು ತುಂಬಿರುವುದರಿಂದ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 12 ಗಂಟೆ ಉಚಿತ ವಿದ್ಯುತ್ ಸರಬರಾಜು ಮಾಡಬೇಕು ಎಂದರು.

    ಬಿಜೆಪಿ ಸರ್ಕಾರ ರೈತರಿಗೆ 5 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ಯೋಜನೆ ಪ್ರಕಟಿಸಿದ್ದು, ಅದನ್ನು ಮುಂದುವರಿಸಬೇಕು. ಗೋವುಗಳ ಸಂರಕ್ಷಣೆಗಾಗಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts