ಬಳಂಜ ಶಾರದೋತ್ಸವ ಆಮಂತ್ರಣ ಬಿಡುಗಡೆ

Bel_Invitation
Published on

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣವನ್ನು ಪ್ರಗತಿಪರ ಕೃಷಿಕ, ವಕೀಲ ಸತೀಶ್ ರೈ ಬಾರ್ದಡ್ಕ ಬಳಂಜ ಸಂಘದಲ್ಲಿ ಬಿಡುಗಡೆಗೊಳಿಸಿದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಎಚ್.ಧರ್ಣಪ್ಪ ಪೂಜಾರಿ, ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಎಚ್.ಎಸ್., ಮಾಜಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ತಾರಿಪಡ್ಪು, ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ದಿನೇಶ್ ಕೋಟ್ಯಾನ್ ಕುದ್ರೊಟ್ಟು, ರಂಜಿತ್ ಪೂಜಾರಿ ಮಜಲಡ್ಡ, ದಿನೇಶ್ ಪೂಜಾರಿ ಅಂತರ, ಯೋಗೀಶ್ ಯೈಕುರಿ, ಸದಾನಂದ ಪೂಜಾರಿ ಬೊಂಟ್ರೋಟ್ಟು, ಜಗದೀಶ್ ತಾರಿಪಡ್ಪು, ಪ್ರವೀಣ್ ಡಿ.ಕೋಟ್ಯಾನ್, ರಕ್ಷಿತ್ ಬಗ್ಯೋಟ್ಟು, ಸದಸ್ಯ ಗೀರೀಶ್ ಬಂಗೇರ ನಿಟ್ಟಡ್ಕ, ಯುವ ಸಾಹಿತಿ ಚಂದ್ರಹಾಸ್ ಬಳಂಜ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net