

ಬಂಟ್ವಾಳ: ಸ್ವಾತಂತ್ರೃ ಯೋಧ ಡಾ.ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಬಂಟ್ವಾಳ ವತಿಯಿಂದ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ಪ್ರಾಯೋಜಕತ್ವದಲ್ಲಿ ಮುದ್ರಣಗೊಂಡ ಡಾ.ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಂಚಿಕೆ ಬಾಳಪಥ ಪುಸ್ತಕ ಬಿಡುಗಡೆ ಹಾಗೂ ಸಂಘದ ಮೂರು ಶಾಖೆಯ ಅಮೂಲ್ಯ ಸ್ವಸಹಾಯ ಸಂಘಗಳ ಸದಸ್ಯರ ಸಮ್ಮಿಲನ ಕಾರ್ಯಕ್ರಮ ಬಂಟ್ವಾಳ ಬೈಪಾಸ್ ಜಂಕ್ಷನ್‌ನಲ್ಲಿ ಶನಿವಾರ ನಡೆಯಿತು.
ಬಾಳಪಥ ಸ್ಮರಣ ಸಂಚಿಕೆಯನ್ನು ಬೆಂಗಳೂರಿನ ಸಹಕಾರಿ ಧುರೀಣ ಮೋಹನದೇವ ಆಳ್ವ ಬಿಡುಗಡೆಗೊಳಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಅಮ್ಮೆಂಬಳ ಆನಂದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ.ತುಕರಾಂ ಪೂಜಾರಿ, ದ.ಕ. ಜಿಲ್ಲಾ ಕುಲಾಲರ ಯಾನೆ ಮೂಲ್ಯರ ಮಾತೃ ಸಂಘ ಅಧ್ಯಕ್ಷ ಮಯೂರ್ ಉಳ್ಳಾಲ್, ಬಿಎಸ್‌ಎಫ್ ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ, ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ಅಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಜನಾರ್ದನ ಬೊಂಡಾಲ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
ಮಂಗಳೂರು ರಥಬೀದಿ ಸರ್ಕಾರಿ ಪದವಿ ಕಾಲೇಜಿನ ಉಪಪ್ರಾಂಶುಪಾಲ ಡಾ.ದುಗ್ಗಪ್ಪ ಕಜೆಕಾರ್ ಪುಸ್ತಕದ ಕುರಿತು ಮಾತನಾಡಿದರು. ಸಂಘದ ನಿರ್ದೇಶಕ ಕಿರಣ್ ಅಟ್ಲೂರು ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಮೋಹನ್ ಎಂ.ಕೆ. ಕಾರ್ಯಕ್ರಮ ನಿರೂಪಿಸಿದರು.