More

    ಸಕಲ ಸರ್ಕಾರಿ ಗೌರವಗಳೊಂದಿಗೆ ಬಲರಾಮನ ಅಂತ್ಯಕ್ರಿಯೆ

    ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಎಂಬ ಖ್ಯಾತಿಗೆ ಪಾತ್ರವಾಗಿರುವ ಬಲರಾಮ(67) ಆನೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ.

    ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿ ಬಲರಾಮನ ಅಂತ್ಯಕ್ರಿಯೆಯನ್ನು ಶಾಸ್ತ್ರೋತ್ರವಾಗಿ ನೆರವೇರಿಸಲಾಯಿತು.

    ಅನಾರೋಗ್ಯದಿಂದ ಸಾವು

    ಬಲರಾಮನ ಗಂಟಲಲ್ಲಿ ಹುಣ್ಣಾಗಿದ್ದ ಕಾರಣ ಏನನ್ನು ಸೇವಿಸದೆ ಆನೆ ನಿತ್ರಾಣಗೊಂಡಿತ್ತು. ಪಶು ವೈದ್ಯರು ಹಾಗೂ ಅರಣ್ಯ ಅಧಿಕಾರಿಗಳು ಬಲರಾಮನನ್ನು ಉಳಿಸಿಕೊಳ್ಳಲು ಸತತವಾಗಿ ಪ್ರಯತ್ನಪಟ್ಟರು ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿದೆ.

    ಕ್ಷಯರೋಗ(TB) ಇಂದ ಬಲರಾಮ ಬಳಲುತ್ತಿದ್ದ ಎಂದು ಶಂಕಿಸಿರುವ ಅಧಿಕಾರಿಗಳು ಆನೆಗೆ ವಿದಾಯ ಹೇಳಿದ್ದಾರೆ.

    ಇದನ್ನೂ ಓದಿ: ಹೆತ್ತ ಮಗುವನ್ನು ಮೂರು ಲಕ್ಷ ರೂಪಾಯಿಗೆ ಮಾರಾಟ ಮಾಡಿದ ತಾಯಿ ಅರೆಸ್ಟ್​!

    balarama (1)

    ಭಾವುಕ ವಿದಾಯ

    ಬಲರಾಮನ ಅಂತ್ಯ ಸಂಸ್ಕಾರದ ವೇಳೆ ಮಾವುತ, ಅರಣ್ಯ ಇಲಾಖೆಯ ಸಿಬ್ಬಂದಿ, ಪಶು ವೈದ್ಯರು ಭಾವುಕರಾಗಿದ್ದರು. ಸೌಮ್ಯ ಸ್ವಭಅವದ ಬಲರಾಮನನ್ನು ನೆನೆದು ಸಿಬ್ಬಂದಿ ವರ್ಗ ಕೆಲಕಾಲ ಗದ್ಗರಿತರಾದರು.

    ಅತ್ಯಂತ ಸೌಮ್ಯ ಸ್ವಭಾವಿಯಾಗಿದ್ದ ಬಲರಾಮ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರವಲ್ಲದೆ, ಸಾರ್ವಜನಿಕರ ಗಮನವನ್ನು ಸೆಳೆದಿತ್ತು. 1999ರಿಂದ 2011ರವರೆಗೆ ಸತತ 14 ಬಾರಿ ಚಿನ್ನದ ಅಂಬಾರಿಯನ್ನು ನಿರಾಯಾಸವಾಗಿ ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಹೊತ್ತು, ಪ್ರೀತಿಗೆ ಪಾತ್ರವಾಗಿತ್ತು.

    balarama

    ಅತ್ಯಂತ ಶಕ್ತಿಶಾಲಿ ಆನೆ

    ಬಲರಾಮ ಅತ್ಯಂತ ಶಕ್ತಿಶಾಲಿ ಆನೆ ಎಂದು ಪ್ರಖ್ಯಾತಿ ಗಳಿಸಿತ್ತು. ಅತ್ಯಂತ ಮೃದು ಸ್ವಭಾವಿಯಾಗಿ ಪರಿವರ್ತನೆಯಾದ ಬಲರಾಮ ಜೀವಿತಾವಧಿಯಲ್ಲಿ ಯಾರಿಗೂ ತೊಂದರೆ ಕೊಡಲಿಲ್ಲ.

    ಬಲರಾಮ ತನ್ನ ಕ್ಯಾಂಪ್‍ ನಲ್ಲಿದ್ದ ಚಿಕ್ಕ ಆನೆಗಳಿಗೂ ತರಬೇತಿದಾರನಾಗಿದ್ದ. ಕೆಲ ಜ್ಯೂನಿಯರ್ ಆನೆಗಳಿಗೂ ಕೆಲವು ವಿಷಯಗಳ ಬಗ್ಗೆ ಹೇಳಿಕೊಡುವುದರಲ್ಲಿ ನಿಸ್ಸೀಮನಾಗಿದ್ದ. ಚಿಕ್ಕ ಆನೆಗಳನ್ನು ಪ್ರೀತಿಯಿಂದ ಕಾಣುತ್ತಿದ್ದ ಬಲರಾಮನ ಸಾವಿನಿಂದ ಭೀಮನಕಟ್ಟೆ ಆನೆ ಶಿಬಿರದಲ್ಲಿ ಶೋಕ ಮಡುಗಟ್ಟಿದೆ.

    balarama (2)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts