ದಾಳಿ ನಡೆದ ಸ್ಥಳದಿಂದ 35 ಉಗ್ರರ ಮೃತದೇಹಗಳನ್ನು ಆಂಬುಲೆನ್ಸ್​ನಲ್ಲಿ ಸಾಗಿಸಿದ್ದ ಪಾಕ್​ ಸೇನೆ: ಪ್ರತ್ಯಕ್ಷದರ್ಶಿಗಳಿಂದ ಮಾಧ್ಯಮಕ್ಕೆ ಮಾಹಿತಿ

Latest News

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ವೈದ್ಯರಿಂದ ಮಾತೃಹೃದಯದ ಸೇವೆ

ಬೆಳ್ತಂಗಡಿ: ವೈದ್ಯರು ಮಾನವೀಯತೆ ಹಾಗೂ ನಗುಮುಖದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ...

ನವದೆಹಲಿ​: ಭಾರತದ ವಾಯುಪಡೆ ಪಾಕಿಸ್ತಾನದಲ್ಲಿ ನಡೆಸಿದ ಏರ್​ಸ್ಟ್ರೈಕ್​ ವಿಚಾರದಲ್ಲಿ ಇನ್ನೂ ಊಹಾಪೋಹಗಳು ಹರಿದಾಡುತ್ತಲೇ ಇವೆ. ಪಾಕಿಸ್ತಾನ ಯಾವುದೇ ಜೀವಹಾನಿಯಾಗಿಲ್ಲ, ಬಯಲು ಪ್ರದೇಶದಲ್ಲಿ ಬಾಂಬ್​ ಬಿದ್ದಿದೆ ಎಂದು ಹೇಳುತ್ತಿದೆ. ಅಲ್ಲದೆ ದೇಶದೊಳಗಿನ ಕೆಲವರೂ ಪುರಾವೆ ಕೇಳುತ್ತಿದ್ದಾರೆ. ಆದರೆ ಈ ವಿದೇಶಿ ಪತ್ರಕರ್ತೆಯೋರ್ವಳು ಮಾಡಿದ ವರದಿ ಹಲವು ವಿವರಗಳನ್ನು ಬಿಚ್ಚಿಟ್ಟಿದೆ.

ಫೆ.26ರಂದು ಬಾಂಬ್​ ದಾಳಿ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಕಿಸ್ತಾನ ಸೈನಿಕರು, ಸ್ಥಳದಿಂದ ಸುಮಾರು 35 ಮೃತದೇಹಗಳನ್ನು ಆಂಬುಲೆನ್ಸ್​ನಲ್ಲಿ ಸಾಗಿಸಿದ್ದನ್ನು ಕಣ್ಣಾರೆ ನೋಡಿದ್ದಾಗಿ ಅಲ್ಲಿನ ಕೆಲವರು ಮಾಧ್ಯಮಕ್ಕೆ ತಿಳಿಸಿದ್ದಾಗಿ ಪತ್ರಕರ್ತೆ ವರದಿ ಮಾಡಿದ್ದಾರೆ.

ದಾಳಿ ನಡೆದ ವೇಳೆ ಒಂದು ತಾತ್ಕಾಲಿಕ ಪಾಳು ಮನೆಯಲ್ಲಿ 12 ಜನ ಮಲಗಿದ್ದರು. ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಬಾಂಬ್​ ಬಿದ್ದ ದೊಡ್ಡ ಶಬ್ದ ಕೇಳುತ್ತಲೇ ಸ್ಥಳೀಯ ಆಡಳಿತ, ಪೊಲೀಸರು ಕೂಡಲೇ ಅಲ್ಲಿಗೆ ಹೋಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಪಾಕಿಸ್ತಾನ ಸೈನಿಕರು ಸುತ್ತುವರಿದಿದ್ದರು. ಪೊಲೀಸರನ್ನಾಗಲೀ, ಅಧಿಕಾರಿಗಳನ್ನಾಗಲೀ ಪ್ರವೇಶಕ್ಕೆ ಬಿಡಲಿಲ್ಲ. ಆಂಬುಲೆನ್ಸ್​ನಲ್ಲಿದ್ದ ವೈದ್ಯಕೀಯ ಸಿಬ್ಬಂದಿಯ ಮೊಬೈಲ್​ನ್ನು ಪಾಕಿಸ್ತಾನ ಆರ್ಮಿ ವಶಪಡಿಸಿಕೊಂಡಿತ್ತು. ಫೋಟೋ, ವಿಡಿಯೋ ಚಿತ್ರೀಕರಣ ಮಾಡದಂತೆ ನಿರ್ಬಂಧ ವಹಿಸಿತ್ತು. ಸ್ಥಳೀಯ ಸರ್ಕಾರಿ ಆಡಳಿತಕ್ಕೆ ಮಾಧ್ಯಮ ಹೇಳಿಕೆ ನೀಡಲು ಅಧಿಕಾರವಿಲ್ಲ ಎಂದು ಆದೇಶ ನೀಡಲಾಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಸವಿವರಾಗಿ ಹೇಳಿದ್ದಾಗಿ ಪತ್ರಕರ್ತೆ ತಿಳಿಸಿದ್ದಾರೆ.

ಪಾಕಿಸ್ತಾನದ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಕರ್ನಲ್​ ಸಲೀಂ ಎಂಬುವರು ದಾಳಿಗೆ ಬಲಿಯಾಗಿದ್ದಾರೆ. ಹಾಗೇ ಕರ್ನಲ್​ ಝರಾರ್​ ಝಕ್ರಿ ಗಾಯಗೊಂಡಿದ್ದಾರೆ. ಜೈಶ್​-ಎ ಮೊಹಮ್ಮದ್​ ಸಂಘಟನೆಯಲ್ಲಿ ತರಬೇತುದಾರನಾಗಿದ್ದ ಪೇಶಾವರ ಮೂಲದ ಮುಫ್ತಿ ಮುಯೀನ್​, ಸುಧಾರಿತ ಸ್ಫೋಟಕಗಳ ತಯಾರಿಕಾ ತಜ್ಞ ಉಸ್ಮಾನ್​ ಘನಿ ಎಂಬುವರು ಕೂಡ ಹತರಾಗಿದ್ದಾರೆಂದು ಪತ್ರಕ್ಷ್ಯದರ್ಶಿಗಳು ಖಚಿತ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ದಾಳಿ ನಡೆದಾಗಿನಿಂದ ಪಾಕಿಸ್ತಾನದಿಂದ ಕೇಳಿಬರುತ್ತಿದ್ದ ಹೇಳಿಕೆಗಳು ಗೊಂದಲಮಯವಾಗಿತ್ತು. ಅಲ್ಲದೆ ಕೆಲವರು ಸ್ಥಳೀಯರೂ ಕೂಡ ಜೈಶ್​ ಎ ಮೊಹಮ್ಮದ್​ ಉಗ್ರರು ಯಾರೂ ಅಲ್ಲಿ ಇರಲಿಲ್ಲ ಎಂದು ಹೇಳಿದ್ದರು. ಮತ್ತೆ ಹಲವರು ಅಲ್ಲಿದ್ದರು ಎಂದಿದ್ದರು. ಆದರೆ ಭಾರತದ ಹಿರಿಯ ಅಧಿಕಾರಿಗಳು, ತಾವು ತಮ್ಮ ಗುರಿ ತಲುಪಿದ್ದೇವೆ. ಉಗ್ರರ ನಾಲ್ಕು ಕಟ್ಟಡಗಳನ್ನು ಧ್ವಂಸ ಮಾಡಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್​)

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...