ಅತಿಥಿ ಶಿಕ್ಷಕರ ನೇಮಕಕ್ಕೆ ಒತ್ತಾಯ

ಹೊಸಪೇಟೆ: ಸರ್ಕಾರಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನಾಗಿ ನೇಮಿಸಿಕೊಳ್ಳುವಂತೆ ಆಗ್ರಹಿಸಿ ಅತಿಥಿ ಶಿಕ್ಷಕರ ಸಂಘದ ತಾಲೂಕು ಘಟಕ ಸಹಾಯಕ ಆಯುಕ್ತೆ ಗಾರ್ಗಿ ಜೈನ್‌ಗೆ ಸೋಮವಾರ ಮನವಿ ಸಲ್ಲಿಸಿತು.

ಹೊಸಪೇಟೆ ಮತ್ತು ಕಂಪ್ಲಿ ತಾಲೂಕಿನಲ್ಲಿ ಆರು ವರ್ಷಗಳಿಂದ 300ಕ್ಕೂ ಹೆಚ್ಚು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದೆವು. ಆದರೆ, ಈಗ ಉದ್ಯೋಗವಿಲ್ಲದೆ ಪರದಾಡುತ್ತಿದ್ದೇವೆ. ನಮ್ಮನ್ನು ನಂಬಿಕೊಂಡ ಕುಟುಂಬಗಳ ಆರ್ಥಿಕ ಸಂಕಷ್ಟ ಸಿಲುಕಿದೆ. ಆದ್ದರಿಂದ ಸರ್ಕಾರಿ ಶಾಲೆಗಳಿಗೆ ಶೀಘ್ರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಕಳೆದ ಸಾಲಿನಲ್ಲಿ ಸೇವೆ ಸಲ್ಲಿಸಿದ ಅತಿಥಿ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಂಘದ ಮುಖಂಡರಾದ ಎ.ಕೆ ಹುಲುಗಪ್ಪ ಕೊಟಗಿನಹಾಳ್, ಪಿ.ಶಿವರಾಜ್, ಎಸ್.ಕೆ.ವಿಠ್ಠಲ, ದೇವರಾಜ್, ಸುನೀತಾ, ನಾಗರತ್ನ, ಪುಷ್ಪಾವತಿ, ಕೊಟ್ರೇಶ್, ಸೌಮ್ಯ, ಮಂಜುನಾಥ್ ಇತರರಿದ್ದರು.

Leave a Reply

Your email address will not be published. Required fields are marked *