ಉಚಿತ ಬಸ್‌ಪಾಸ್ ವಿತರಣೆಗೆ ಒತ್ತಡ

ಹೊಸಪೇಟೆ: ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್ ತಾಲೂಕು ಸಮಿತಿ ಗ್ರೇಡ್-2 ತಹಸೀಲ್ದಾರ್‌ಗೆ ಸೋಮವಾರ ಮನವಿ ಸಲ್ಲಿಸಿತು.

ಹಿಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಲು ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಸಾರಿಗೆ ಅಧಿಕಾರಿಗಳು ಬಸ್‌ಪಾಸ್ ಹಣ ಸಂಗ್ರಹಿಸುವ ಆದೇಶ ಹೊರಡಿಸಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ಸಾರಿಗೆ ಅಧಿಕಾರಿಗಳ ತುರ್ತು ಸಭೆ ಕರೆದು, ಶೀಘ್ರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಮಿತಿ ಜಿಲ್ಲಾ ಕಾರ್ಯದರ್ಶಿ ಎಚ್.ಎರ‌್ರಿಸ್ವಾಮಿ, ರವಿ, ಡಾ.ಪಂಪಾಪತಿ, ಹುಲುಗಪ್ಪ, ಅಭಿಷೇಕ್, ಮಂಜು ನಾಯಕ, ಅರುಣಾ, ಅರ್ಚನಾ, ತಾಯಪ್ಪ ಇತರರಿದ್ದರು.

Leave a Reply

Your email address will not be published. Required fields are marked *