20.4 C
Bengaluru
Sunday, January 19, 2020

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲಿಸಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವಾಲಯ(ಎನ್‌ಐಆರ್‌ಡಿ ಮತ್ತು ಪಿಆರ್)ದ ಹಿರಿಯ ಸಂಪನ್ಮೂಲ ವ್ಯಕ್ತಿ ಡಾ.ಎಸ್.ವಿ.ರಂಗಾಚಾರ್ಯಲು, ರಿಸರ್ಚ್ ಅಸೋಸಿಯೇಟ್ ಡಾ.ಕೆ.ಜಯಶ್ರೀ ನೇತೃತ್ವದ ತಂಡ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿಗೆ ಭೇಟಿ ನೀಡಿ ಶಿವಪುರ ಕಾದಿಟ್ಟ ಆನೆಕಲ್ಲು ಅರಣ್ಯ ಪ್ರದೇಶ ಮತ್ತು ಮಾಲವಿ ಜಲಾಶಯದ ಹಿನ್ನೀರು ಪ್ರದೇಶದಲ್ಲಿ 2018-19 ಮತ್ತು 2019-20ನೇ ಸಾಲಿನ ಖಾತ್ರಿ ಯೋಜನೆಯಡಿ ಅನುಷ್ಠಾನಗೊಂಡಿರುವ ಅರಣ್ಯೀಕರಣ ಹಾಗೂ ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳನ್ನು ಪರಿಶೀಲಿಸಿ, ಕೂಲಿ ಕಾರ್ಮಿಕರಿಂದ ಮಾಹಿತಿ ಪಡೆದರು.

ಜಿಪಂ ಸಿಇಒ ಕೆ.ನಿತೀಶ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳು, ಕೃಷಿ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳಿದ್ದರು. ನರೇಗಾ ಅವಾರ್ಡ್ ಶಿಫಾರಸಿಗೆ ಬಳ್ಳಾರಿ ಜಿಲ್ಲೆ ಆಯ್ಕೆಯಾಗಿರುವ ಕುರಿತು ಡಿ.4ರಂದು ವಿಜಯವಾಣಿ ‘ಗಣಿ ಜಿಲ್ಲೆಗೆ ಒಲಿಯಲಿದೆಯೇ ನ್ಯಾಷನಲ್ ಅವಾರ್ಡ್’..? ಎಂಬ ಶಿರ್ಷಿಕೆಯಡಿ ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಧಿಕಾರಿಗಳಿಂದ ಶ್ಲಾಘನೆ
ಹಿಂದಿನ ಜಿಪಂ ಸಿಇಒ ರಾಜೇಂದ್ರ ಅವರಿಂದ ಹಿಡಿದು ಹಾಲಿ ಸಿಇಒ ಕೆ.ನಿತೀಶ್ ಅವರು ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ನರೇಗಾ ಕಾಮಗಾರಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಾರೆ. ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಜಿಲ್ಲೆಗೆ ನರೇಗಾ ಪ್ರಶಸ್ತಿ ಸಿಗಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...