ಶಿವ-ರಾಮನ ಸಮರ – ಯಾರಿಗೆ ಗೆಲುವಿನ ವರ

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ನಡುವೆ ರಾಜಕೀಯ ಸಮರ ಶುರುವಾಗಿದೆ. ಸಂಡೂರಿನಲ್ಲಿ ನಡೆದ ಮೈತ್ರಿ ಪಕ್ಷದ ಸಮಾವೇಶದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಾತಿನ ಸಮರಕ್ಕೆ ಮುನ್ನುಡಿ ಬರೆದಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಮುಖಂಡ ಶ್ರೀರಾಮುಲು ಮೂರನೇ ಬಾರಿ ರಾಜಕೀಯ ಯುದಟಛಿಕ್ಕೆ ಅಣಿಯಾಗಿದ್ದು ಗೆಲ್ಲೋರ‌್ಯಾರು ಎಂಬುದು ಪ್ರಶ್ನೆಯಾಗಿದೆ.

2014ರಲ್ಲಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ, 2018ರಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳಿಗಿಂತ ಹೆಚ್ಚು ಚರ್ಚೆಯಲ್ಲಿದ್ದವರು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಮುಖಂಡ ಬಿ.ಶ್ರೀರಾಮುಲು. ಇದೀಗ ಜಿಲ್ಲೆಯಲ್ಲಿ ಮೂರನೇ ಬಾರಿಗೆ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಶ್ರೀರಾಮುಲು ಪರೋಕ್ಷವಾಗಿ ಮುಖಾಮುಖಿಯಾಗುತ್ತಿದ್ದಾರೆ.

2014ರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಬಿಎಸ್ಸಾರ್ ಕಾಂಗ್ರೆಸ್ ಶಾಸಕರಾಗಿದ್ದ ಶ್ರೀರಾಮುಲು ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಹಿನ್ನೆಲೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಎನ್.ವೈ.ಗೋಪಾಲಕೃಷ್ಣ ಹಾಗೂ ಬಿಜೆಪಿಯಿಂದ ಶ್ರೀರಾಮುಲು ಆಪ್ತ ಓಬಳೇಶ್ ಸ್ಪರ್ಧಿಸಿದ್ದರು. ಶ್ರೀರಾಮುಲು ಶಾಸಕರಾಗಿದ್ದ ಕ್ಷೇತ್ರ ನಿರಾಯಾಸವಾಗಿ ಕಾಂಗ್ರೆಸ್ ಪಾಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ 33104 ಮತಗಳ ಅಂತರದಿಂದ ಗೆದ್ದಿದ್ದರು. ಈ ಗೆಲುವಿನ ಶ್ರೇಯಸ್ಸು ಅಂದು ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿದ್ದ ಡಿ.ಕೆ. ಶಿವಕುಮಾರ್‌ಗೆ ಸಂದಿತ್ತು.

ಶ್ರೀರಾಮುಲು ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ 2018ರಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ವಿ.ಎಸ್.ಉಗ್ರಪ್ಪ ಹಾಗೂ ಬಿಜೆಪಿಯಿಂದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ.ಶಾಂತಾ ಸ್ಪರ್ಧಿಸಿದ್ದರು. ಶ್ರೀರಾಮುಲು ಪ್ರತಿನಿಧಿಸಿದ್ದ ಕ್ಷೇತ್ರ ಸುಲಭವಾಗಿ ಕಾಂಗ್ರೆಸ್ಸಿನ ಕೈ ಹಿಡಿದಿತ್ತು. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಕ್ಷೇತ್ರದ ಇತಿಹಾಸದಲ್ಲೇ ದಾಖಲೆಯ 2.43 ಮತಗಳ ಅಂತರದಿಂದ ಗೆದ್ದಿದ್ದರು. ಈ ಚುನಾವಣೆಯ ಗೆಲುವಿನ ಕೀರ್ತಿ ಕೂಡ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಸೇರಿತ್ತು.

ಎರಡು ಉಪ ಚುನಾವಣೆಯಲ್ಲಿ ಪರೋಕ್ಷವಾಗಿ ಎದುರಾಗಿದ್ದ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಬಿ.ಶ್ರೀರಾಮುಲು ಇದೀಗ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗುತ್ತಿದ್ದಾರೆ. ಕಾಂಗ್ರೆಸ್ಸಿನಿಂದ ವಿ.ಎಸ್.ಉಗ್ರಪ್ಪ ಹಾಗೂ ಬಿಜೆಪಿಯಿಂದ ವೈ.ದೇವೇಂದ್ರಪ್ಪ ಅಭ್ಯರ್ಥಿಗಳಾಗಿದ್ದಾರೆ. ಈ ಬಾರಿಯೂ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಕ್ರಮವಾಗಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಶ್ರೀರಾಮುಲು ಹೆಗಲೇರಿದೆ. ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಶ್ರೀರಾಮುಲು ನಡುವೆ ನಡೆಯುತ್ತಿರುವ ಮೂರನೇ ಮಹಾಯುದಟಛಿದಲ್ಲಿ ಗೆಲ್ಲೋರ‌್ಯಾರು ಎಂಬುದನ್ನು ಕಾದು ನೋಡಬೇಕಿದೆ.

ಮೂರನೇ ಆಟ ಮತ್ತು ಪೀಕಲಾಟ?
ಶ್ರೀರಾಮುಲು ಬಿಜೆಪಿಯಲ್ಲಿ ರಾಜ್ಯ ಮಟ್ಟದ ನಾಯಕ ರಾಗಿ ಗುರುತಿಸಿಕೊಂಡಿದ್ದಾರೆ. ಬಳ್ಳಾರಿ ಗ್ರಾಮೀಣ ವಿಧಾನಸಭಾ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರ ಶ್ರೀರಾಮುಲು ಪ್ರತಿನಿಧಿಸುವ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ. ಆದರೂ, ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಮೇಲುಗೈ ಸಾಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಕ್ಷೇತ್ರ ಮೀಸಲು ಇರದಿದ್ದರೆ ನಾನೇ ಸ್ಪರ್ಧಿಸುತ್ತಿದ್ದೆ ಎನ್ನುವ ಮೂಲಕ ಸಚಿವ ಡಿ.ಕೆ. ಶಿವಕುಮಾರ್ ಸ್ಥಳೀಯ ಬಿಜೆಪಿ ನಾಯಕರಿಗೆ ನೇರವಾಗಿಯೇ ಸವಾಲು ಹಾಕಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಜಿಲ್ಲೆಯಲ್ಲಿ ಗೆಲುವಿನ ಹ್ಯಾಟ್ರಿಕ್ ಸಾಧನೆ ಮಾಡುತ್ತಾರಾ ಎಂಬುದು ಸದ್ಯ ಚರ್ಚೆಯಲ್ಲಿರುವ ವಿಷಯವಾಗಿದೆ.

| ಅಶೋಕ ನೀಮಕರ್ ಬಳ್ಳಾರಿ