More

    ಡಿಜಿಟಲ್ ಪೇಮೆಂಟ್ ಬಗ್ಗೆ ಇರಲಿ ಎಚ್ಚರ ಎಂದು ಕಿವಿಮಾತು ಹೇಳಿದ ನ್ಯಾಯಾಧೀಶ ಸತೀಶ ಬಾಳಿ

    ಬಳ್ಳಾರಿ: ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಮೊದಲು ಅರಿತುಕೊಳ್ಳಬೇಕು. ಆಗ ಮಾತ್ರ ಮೋಸಕ್ಕೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸತೀಶ ಜೆ.ಬಾಳಿ ಹೇಳಿದರು.

    ನಗರದ ಡಾ.ರಾಜಕುಮಾರ್ ರಸ್ತೆಯ ಬಿಡಿಎಎ ಫುಟ್‌ಬಾಲ್ ಮೈದಾನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೆಎಫ್‌ಸಿಎಸ್‌ಸಿ ಆಶ್ರಯದಲ್ಲಿ ಶುದ್ಧ ಶಕ್ತಿ ಪರಿವರ್ತನೆ ಘೋಷವಾಕ್ಯದೊಂದಿಗೆ ಬುಧವಾರ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

    ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ ಎನ್. ಮಾತನಾಡಿ, ಗ್ರಾಹಕರ ಹಕ್ಕುಗಳು ಮತ್ತು ಅಗತ್ಯತೆಗಳ ಬಗ್ಗೆ, ಗ್ರಾಹಕರು ತಮಗಾಗುವ ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಲು ಸಾಧ್ಯವಾಗುವ ನಿಟ್ಟಿನಲ್ಲಿ ಜಾಗತಿಕವಾಗಿ ಜಾಗೃತಿ ಮೂಡಿಸಲು ಈ ವಿಶ್ವ ಗ್ರಾಹಕರ ದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

    ಜಿಲ್ಲಾ ವಕೀಲರ ಸಂಘದ ಹಿರಿಯ ವಕೀಲ ಅಂಕಲಯ್ಯ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕುಮಾರ, ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ನೀಡಿದರು.

    ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಸೋಮಶೇಖರಪ್ಪ ಕೆ.ಹಂದಿಗೋಳ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ವಕೀಲೆ ತ್ರಿವೇಣಿ ಪತ್ತಾರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಮೊಹಮ್ಮದ್ ಖೈಜರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts