More

    ಸರ್ಕಾರಿ ಶಾಲೆ ಮತ್ತು ಕಾಲೇಜಿನಲ್ಲಿ ಧಾರ್ಮಿಕ ಹಬ್ಬಗಳಿಗೆ ನಿರ್ಬಂಧ

    ಬೆಂಗಳೂರು: ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಇದು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದೆ.

    ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ. ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ.

    ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿದೆ. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

    1) ಗಣರಾಜ್ಯೋತ್ಸವ
    2) ಸ್ವಾತಂತ್ರ್ಯ ದಿನಾಚರಣೆ
    3) ಗಾಂಧಿ ಜಯಂತಿ
    4) ಕನ್ನಡ ರಾಜ್ಯೋತ್ಸವ
    5) ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ
    6) ವಾಲ್ಮೀಕಿ ಜಯಂತಿ
    7) ಕನಕದಾಸ ಜಯಂತಿ
    8) ಬಸವ ಜಯಂತಿ
    9) ಸಂವಿಧಾನ ಜಯಂತಿ
    10) ಯೋಗ ದಿನಾಚರಣೆ

    ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಕಾಲೇಜುಗಳಲ್ಲಿ ಈ ಮೇಲಿನ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುಬೇಕು. ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬವನ್ನು ಆಚರಿಸುವುದು ಕಂಡುಬಂದಲ್ಲಿ ಸಂಬಂಧ ಪಟ್ಟ ಪ್ರಾಂಶುಪಾಲ ಹಾಗೂ ಸಿಬ್ಬಂದಿ ವಿರುದ್ಧ ನಿಯಮನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts