More

    ಮದುವೆ, ಗಣೇಶೋತ್ಸವ, ರಾಜಕೀಯ ಸಮಾವೇಶಗಳಲ್ಲಿ ಅಪಾಯಕಾರಿ ಪಟಾಕಿ ಬ್ಯಾನ್; ದೀಪಾವಳಿಗೆ?


    ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಮಹತ್ವದ ನಿರ್ಧಾರ ಪ್ರಕಟಿಸಿರುವ ಸರ್ಕಾರ, ಗಣೇಶೋತ್ಸವ, ಮದುವೆ, ರಾಜಕೀಯ ಸಮಾರಂಭ, ಮೆರವಣಿಗೆ, ಸಮಾವೇಶ, ಕಾರ್ಯಕ್ರಮಗಳಲ್ಲಿ ಅಪಾಯಕಾರಿ ಪಟಾಕಿ ಹೊಡೆಯುವುದನ್ನು ನಿಷೇಧಿಸಿದೆ.
    ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದ್ದು, ಸರ್ಕಾರದ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದರು.
    ರಾಜ್ಯದಲ್ಲಿ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ. ಉಳಿದ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಹಾಗೆಯೇ ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಸಲು ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಿದರು.
    ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳಿದ್ದರೆ ಕ್ರಮ ಕೈಗೊಳ್ಳಲಾಗುವುದು. ಪರಿಶೀಲನೆ ಮಾಡಿ ಕ್ರಮಕ್ಕೆ ಸೂಚಿಸಿದ್ದೇವೆ. ಇನ್ನು ಮುಂದೆ ಪಟಾಕಿ ಅಂಗಡಿಗಳಿಗೆ ಲೈಸೆನ್ಸ್‌ಗಳಿಗೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಲೈಸೆನ್ಸ್ ಕಡ್ಡಾಯ ಮಾಡಲಾಗಿದೆ ಎಂದರು.

    ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಜಿಪಿ ಅಲೋಕ್ ಮೋಹನ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧೀಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts