More

    ಭ್ರೂಣಲಿಂಗ ಪತ್ತೆ ತಡೆ:ಕಠಿಣ ಕಾನೂನು ಜಾರಿಗೆ ಐಎಂಎ ಆಗ್ರಹ

    ಬೆಂಗಳೂರು: ಭ್ರೂಣ ಲಿಂಗ ಪತ್ತೆಯಂತಹ ಕಾನೂನುಬಾಹಿರ ಪದ್ಧತಿಗಳು ಸಮಾಜಕ್ಕೆ ಹಾಗೂ ವೈದ್ಯಕೀಯ ವೃತ್ತಿಗೆ ಹಾನಿಕರ ಎಂದು ಕಳವಳ ವ್ಯಕ್ತಪಡಿಸಿರುವ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕರ್ನಾಟಕ ರಾಜ್ಯ ಶಾಖೆ, ಇದರ ತಡೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದೆ.

    ಮೈಸೂರು, ಮಂಡ್ಯ, ಹೊಸಕೋಟೆ ಮತ್ತು ಬೆಂಗಳೂರಿನಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣಹತ್ಯೆ ಪ್ರಕರಣಗಳು ವೈದ್ಯಕೀಯ ಕ್ಷೇತ್ರದಲ್ಲಿನ ಕೊಳಕು ದುಷ್ಕೃತ್ಯಗಳನ್ನು ಬಹಿರಂಗಪಡಿಸಿದೆ. ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಇಂತಹ ಕೃತ್ಯಗಳಲ್ಲಿ ತೊಡಗುವುದನ್ನು ಐಎಂಎ ಎಂದಿಗೂ ಬೆಂಬಲಿಸುವುದಿಲ್ಲ ಎಂದು ಸಂಘದ ಅಧ್ಯಕ್ಷ ಡಾ. ಎಸ್. ಶ್ರೀನಿವಾಸ್ ಹೇಳಿದ್ದಾರೆ.

    ಭ್ರೂಣ ಲಿಂಗ ಪತ್ತೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೂಲಂಕಷವಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು. ಕೆಪಿಎಂಇ ಕಾಯ್ದೆಯಡಿ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ) ನಕಲಿ ವೈದ್ಯರನ್ನು ಗುರುತಿಸಿ, ಅವರ ಮೇಲೂ ಕಾನೂನಿನ ಅಡಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

    ಈ ಬಗ್ಗೆ ಜಾಗೃತಿಯೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts