More

    ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್; ಪರೀಕ್ಷಾ ವರದಿ ಹೇಳಿದ್ದೇನು?

    ಬೆಂಗಳೂರು: ಗೋಬಿ ಮಂಚೂರಿಯನ್ ಹಾಗೂ ಕಾಟನ್​ ಕ್ಯಾಂಡಿ ಭಾರತದಲ್ಲಿ ಜನಪ್ರಿಯವಾಗಿರುವ ಆಹಾರ ಪದಾರ್ಥಗಳಾಗಿವೆ. ಭಾರತೀಯ ಅಭಿರುಚಿಗೆ ತಕ್ಕಂತೆ ಈ ಎರಡು ಖಾದ್ಯಗಳಿದ್ದು, ಇದು ಸಖತ್​ ಫೆಮಸ್​ ಕೂಡಾ ಆಗಿದೆ. ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ಕಾಟನ್​​ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್​ ​ಅನ್ನು ಈಗ ರಾಜ್ಯದಲ್ಲೂ ನಿಷೇಧಿಸುವ ಸಾಧ್ಯತೆ ದಟ್ಟವಾಗಿದೆ.

    ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ. ಈ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು. ಇದನ್ನು ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.

    ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್‌-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ ‘ಸನ್‌ಸೆಟ್‌ ಯೆಲ್ಲೊ’ ಮತ್ತು ‘ಟಾಟ್ರ್ರಾಜಿನ್‌’ ಎಂಬ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎರಡೂ ಪ್ರಸಿದ್ಧ ತಿನಿಸುಗಳನ್ನು ನಿಷೇಧಿಸಲು ಮುಂದಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ವರದಿ ಆಧರಿಸಿ ರಾಜ್ಯ ಸರ್ಕಾರ ಈ ಎರಡು ಖಾದ್ಯಗಳನ್ನು ನಿಷೇಧಿಸಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ.

    Cotton Manchurian

    ಇದನ್ನೂ ಓದಿ: ಯುಪಿ ವಿರುದ್ಧ ಡೆಲ್ಲಿಗೆ ಸೋಲು; WPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

    ತಮಿಳುನಾಡು ಹಾಗೂ ಪಾಂಡಿಚೆರಿಯ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿಬಾಂಬೆ ಮಿಠಾಯಿ (ಕಾಟನ್‌ ಕ್ಯಾಂಡಿ)ಯಲ್ಲಿ ರೋಡಮೈನ್‌-ಬಿ ಅಂಶ ಇರುವುದು ದೃಢಪಟ್ಟಿದೆ. ಹೀಗಾಗಿ ಅಲ್ಲಿನಿಷೇಧ ಮಾಡಲಾಗಿದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್‌ ರೋಗ ಬರುವ ಸಾಧ್ಯತೆ ಇದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ರೋಡಮೈನ್‌-ಬಿ ಅಥವಾ ಆರ್‌ಎಚ್‌ಬಿ ಎಂದು ಕರೆಯುವ ರಾಸಾಯನಿಕವನ್ನು ಜವಳಿ, ಕಾಗದ, ಚರ್ಮ ಮತ್ತು ಬಣ್ಣಗಳ ಉದ್ಯಮದಲ್ಲಿಕೆಂಪು ಮತ್ತು ಗುಲಾಬಿ ಬಣ್ಣಕ್ಕಾಗಿ ಬಳಸಲಾಗುತ್ತದೆ. ಈ ರಾಸಾಯನಿಕವು ಆಹಾರದ ಮೂಲಕ ದೇಹ ಸೇರಿದರೆ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ರೋಡಮೈನ್‌-ಬಿ ನಿಯಮಿತವಾಗಿ ಸೇವಿಸಿದರೆ ಮೆದುಳಿನಲ್ಲಿರುವ ಸೆರೆಬೆಲ್ಲಮ್‌ ಅಂಗಾಂಶಕ್ಕೆ ಮತ್ತು ಮಿದುಳನ್ನು ಬೆನ್ನು ಹುರಿಗೆ ಸಂಪರ್ಕಿಸುವ ಮೆದುಳಿನ ಕಾಂಡಕ್ಕೆ ತೀವ್ರ ಹಾನಿ ಉಂಟುಮಾಡುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts