More

    ಪಿಒಪಿ ಗಣಪ ಮೂರ್ತಿಗಳ ಮಾರಾಟ ನಿಷೇಧ

    ಹರಿಹರ: ಪರಿಸರಕ್ಕೆ ಹಾನಿಕಾರಕ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಮಾರಾಟ ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದರೆ ಅಂಥಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ಐಗೂರು ಬಸವರಾಜ್ ಹೇಳಿದರು.

    ನಗರದ ವಿವಿಧೆಡೆ ಗಣೇಶ ಮೂರ್ತಿ ಮಾರಾಟ ಮಳಿಗೆಗಳಿಗೆ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ಪಿಒಪಿ ಮೂರ್ತಿಗಳನ್ನು ವಶಕ್ಕೆ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

    ಹೆಚ್ಚಿನ ಸ್ಥಳಗಳಲ್ಲಿ ಪರಿಸರಪೂರಕ ಗಣೇಶ ಮೂರ್ತಿಗಳಿರುವುದು ಗಮನಕ್ಕೆ ಬಂದಿದೆ. ಕೆಲವೆಡೆ ಕಂಡುಬಂದ ಪಿಒಪಿ ನಿರ್ಮಿತ ಏಳು ಗಣೇಶ ಮೂರ್ತಿ ವಶಪಡಿಸಿಕೊಂಡು ಸಂಬಂಧಿತರಿಗೆ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.

    ಜಲಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಕೆರೆ, ನದಿ, ಕಾಲುವೆ, ಬಾವಿ ಮತ್ತಿತರ ಜಲಮೂಲಗಳಲ್ಲಿ ಪಿಒಪಿ ಹಾಗೂ ಬಣ್ಣ ಲೇಪಿತ ವಿಗ್ರಹ ವಿಸರ್ಜನೆ ನಿಷೇಧಿಸಲಾಗಿದೆ. ಎಚ್ಚರಿಕೆ ನಂತರವೂ ಪಿಒಪಿ ಗಣೇಶ ಮೂರ್ತಿ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಲಕ್ಷಿ ್ಮೀಕಾಂತ್ ಹಾಗೂ ನಗರಸಭೆ ಅಧಿಕಾರಿಗಳ ನೇತೃತ್ವದ ತಂಡ ನಗರದ ಹಂಸಾಗರ ಕಾಂಪೌಂಡ್, ಕುಂಬಾರ ಓಣಿ, ಶಿವಮೊಗ್ಗ ರಸ್ತೆ ಮತ್ತಿತರ ಭೇಟಿ ನೀಡಿ ಪರೀಶಿಲನೆ ನಡೆಸಿತು.
    ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸಂತೋಷ್ ನಾಯ್ಕ, ರವಿ ಪ್ರಕಾಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts