More

    ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

    ಮೈಸೂರಿನ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಮತ್ತು ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯಕಾರಿಯಾಗಿರುವ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬಿತ್ತಿ ಪತ್ರ, ತೋರಣ, ಬಾವುಟಗಳು, ತಟ್ಟೆ-ಲೋಟ, ಚಮಚಗಳು ಮತ್ತು ಊಟದ ಟೇಬಲ್‌ಗಳಲ್ಲಿ ಬಳಸುವ ಪ್ಲಾಸ್ಟಿಕ್ ಹಾಳೆಗಳು ಥರ್ಮಾಕೋಲ್‌ನಂತಹ ಏಕ ಬಳಕೆ ವಸ್ತುಗಳ ದಾಸ್ತಾನು, ವಿತರಣೆ ಹಾಗೂ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.


    ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಅಕ್ರಮ ಮಾರಾಟ, ದಾಸ್ತಾನು ಸಂಗ್ರಹಣೆ ಹಾಗೂ ಬಳಕೆ ಕಂಡುಬOದಲ್ಲಿ ಕಾನೂನಾತ್ಮಕವಾಗಿ ದಂಡವನ್ನು ವಿಧಿಸಲಾಗುವುದು. ಪದೇ ಪದೇ ನಿಯಮ ಉಲ್ಲಂಘನೆ ಮಾಡಿದಲ್ಲಿ ಉದ್ದಿಮೆ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಮತ್ತು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts