23.9 C
Bangalore
Friday, December 6, 2019

ಲೈಟ್ ಫಿಶಿಂಗ್, ಬುಲ್‌ಟ್ರಾಲ್‌ಗೆ ನಿಷೇಧ

Latest News

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

<<ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್ * ಆದೇಶ ಪಾಲಿಸುವಂತೆ ಮಲ್ಪೆ ಪರ್ಸೀನ್ ಸಂಘಕ್ಕೆ ಸೂಚನೆ>>

ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಕರ್ನಾಟಕ, ಕೇರಳ ಸೇರಿ ಕರಾವಳಿಯ ವಿಶೇಷ ಆರ್ಥಿಕ ವಲಯದ (ಇಇಝಡ್) ವ್ಯಾಪ್ತಿಯ ಆಳ ಸಮುದ್ರದಲ್ಲಿ ಬೆಳಕು ಮೀನುಗಾರಿಕೆ ಅಥವಾ ಬುಲ್ ಅಥವಾ ಪೇರ್ ಟ್ರಾಲಿಂಗ್ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶ ಪಾಲಿಸುವಂತೆ ಉಡುಪಿಯ ಮಲ್ಪೆ ಬಂದರಿನ ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಲೈಟ್ ಫಿಶಿಂಗ್ ವಿರುದ್ಧ ಸಾಂಪ್ರದಾಯಿಕ ದೋಣಿ ಮೀನುಗಾರರು ಮಂಗಳೂರು, ಮಲ್ಪೆ, ಗಂಗೊಳ್ಳಿ ಮೊದಲಾದೆಡೆ ಪ್ರತಿಭಟನೆ ನಡೆಸಿದ್ದರು. ಈ ನಡುವೆ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿತ್ತು. ಹಲವು ಬಾರಿ ಮುಂದೂಡಲ್ಪಟ್ಟ ಪ್ರಕರಣದ ವಿಚಾರಣೆ ಬುಧವಾರ ನಡೆದು ಲೈಟ್ ಫಿಶಿಂಗ್ ಹಾಗೂ ಬುಲ್ ಟ್ರಾಲಿಂಗ್ ಮಾಡದಂತೆ ಪರ್ಸೀನ್ ಹಾಗೂ ಟ್ರಾಲ್ ಬೋಟ್ ಮೀನುಗಾರರಿಗೆ ನ್ಯಾಯಾಲಯ ಆದೇಶ ಮಾಡಿದೆ.
ಅರ್ಜಿದಾರರಿಗೆ ಷರತ್ತು ಬದ್ಧ ಮೀನುಗಾರಿಕೆಗೆ ಅವಕಾಶ ನೀಡಿ 2018ರ ಡಿ.21ರಂದು ನೀಡಿದ್ದ ಆದೇಶವನ್ನು ಬುಧವಾರ ಮಾರ್ಪಾಡು ಮಾಡಿರುವ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಪೀಠ, 2017ರ ನ.10ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಪಾಲನೆ ಮಾಡಲು ಅರ್ಜಿದಾರ ಸಂಘಕ್ಕೆ ಸೂಚಿಸಿದೆ.
ಇದಕ್ಕೂ ಮುನ್ನ ಕೇಂದ್ರ ಸರ್ಕಾರದ ಪರ ವಕೀಲೆ ಎಂ.ಸಿ. ನಾಗಶ್ರೀ ವಾದ ಮಂಡಿಸಿ, ಎಲ್‌ಇಡಿ, ಹಾಲೋಜನ್ ದೀಪಗಳ ಬೆಳಕು ಬಳಸಿ ಸಮುದ್ರಾಳದಲ್ಲಿ ಯಾಂತ್ರೀಕೃತ ದೋಣಿ ಮೂಲಕ ಮೀನುಗಾರಿಕೆ ಮಾಡುವುದರಿಂದ, ಅಲ್ಲಿನ ಅಪರೂಪದ ಮೀನು ಸಂತತಿ ನಾಶವಾಗುತ್ತವೆ. ಇದರಿಂದ ಮೀನು ಉತ್ಪತ್ತಿ ಪ್ರಮಾಣ ಕುಸಿಯುತ್ತದೆ, ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕೋಟ್ಯಂತರ ರೂ. ಬಂಡವಾಳ ಹೂಡಿ ಯಾಂತ್ರೀಕೃತ ದೋಣಿ ಖರೀದಿಸಿ ಬೆಳಕು ಬಳಸಿ ಮೀನುಗಾರಿಕೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರದಿಂದ ಬಂಡವಾಳ ಹೂಡಿದವರು ಮತ್ತವರ ಕುಟುಂಬಕ್ಕೆ ತೊಂದರೆಯಾಗಿದೆ. ಆದೇಶ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಪತ್ರ ಬರೆದು ಮನವಿ ಮಾಡಿದ್ದರೂ, ಅದಕ್ಕೆ ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ದೂರಿದರು.
ಬೆಳಕು ಮೀನುಗಾರಿಕೆ ನಿಷೇಧಿಸುವಂತೆ ಕೋರಿ ಕೆಲ ಪಾರಂಪರಿಕೆ ಮೀನುಗಾರರೂ ಸಹ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಪ್ರಕರಣವೇನು?:  ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ಸೇರಿ ವಿಶೇಷ ವಿತ್ತ ವಲಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೃತಕ ಬೆಳಕು ಬಳಸಿ ಸಮುದ್ರದಾಳದಲ್ಲಿ ಮೀನುಗಾರಿಕೆ ನಡೆಸಲಾಗುತ್ತಿತ್ತು. ಅದು ಮೀನು ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದರಿಂದ ಕೇಂದ್ರ ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವಾಲಯ 2017ರಲ್ಲಿ ಬೆಳಕು ಮೀನುಗಾರಿಕೆಯನ್ನು ನಿಷೇಧಿಸಿತ್ತು. ಇದನ್ನು ಪ್ರಶ್ನಿಸಿ ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.

ಲೈಟ್ ಫಿಶಿಂಗ್‌ನಿಂದ ಸಾಂಪ್ರದಾಯಿಕ ಮೀನುಗಾರರು ತೊಂದರೆಗೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಕಡೆ ಹೋರಾಟ ನಡೆದಿದೆ. ಈಗ ಕಾನೂನು ಹೋರಾಟದಲ್ಲಿ ಜಯ ಸಿಕ್ಕಿದೆ. ಆದರೆ ಕಾನೂನು ಉಲ್ಲಂಘಿಸಿ ಮತ್ತೆ ಲೈಟ್ ಫಿಶಿಂಗ್ ಮಾಡಿದರೆ ಅವರ ವಿರುದ್ಧ ಇಲಾಖೆ ಏನು ಮಾಡುತ್ತದೆ ಎಂಬುದನ್ನು ನೋಡಬೇಕಾಗಿದೆ.
– ನಿತಿನ್ ಕುಮಾರ್, ಮೀನುಗಾರ ಮುಖಂಡ, ಮಂಗಳೂರು

ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದು ನಿಯಮ ಉಲ್ಲಂಘಿಸಿ ಲೈಟ್ ಫಿಶಿಂಗ್ ನಡೆಸದಂತೆ ಆದೇಶ ಹೊರ ಬಿದ್ದಿದೆ. ಪರ್ಸೀನ್ ಮೀನುಗಾರರು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವಂತಿಲ್ಲ. ಈ ಬಗ್ಗೆ ಇಲಾಖೆಯಿಂದ ನಿಗಾ ಇಡಲಾಗುವುದು.
– ಚಿಕ್ಕವೀರ ನಾಯಕ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ, ಮಂಗಳೂರು

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...