More

    ಬನಶಂಕರಿ ದೇವಾಲಯದಲ್ಲಿ ಮಕ್ಕಳಿಗೆ ಹಾಲುಣಿಸುವ ಕೇಂದ್ರಕ್ಕೆ ಚಾಲನೆ

    ಬೆಂಗಳೂರು: ಶ್ರಾವಣ ಮಾಸದ ಮೊದಲ ಶುಕ್ರವಾರ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಇದೇ ವೇಳೆ ದೇವಾಲಯದ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

    ದೇವಾಲಯದಲ್ಲಿ ವಿಶೇಷ ದಿನಗಳಲ್ಲಿ ಆಗಮಿಸುವ ಭಕ್ತರಲ್ಲಿ ಬಹಳಷ್ಟು ಮಹಿಳೆಯರು ಎಳೆಯ ಮಕ್ಕಳನ್ನು ಕರೆ ತಂದಿರುತ್ತಾರೆ. ಹೀಗಾಗಿ ಇವರಿಗೆ ಅನುಕೂಲವಾಗುವಂತೆ ದೇವಾಲಯದ ಆವರಣದಲ್ಲಿ ಮಕ್ಕಳಿಗೆ ಹಾಲುಣಿಸುವ ಕೇಂದ್ರ ನಿರ್ಮಿಸಲಾಗಿದ್ದು, ಸಚಿವ ರಾಮಲಿಂಗಾರೆಡ್ಡಿ ಕೇಂದ್ರವನ್ನು ಉದ್ಘಾಟಿಸಿದರು. ಇದೇ ವೇಳೆ ದೇವಾಲಯದಲ್ಲಿ ಹರಕೆ ಹೊತ್ತು ಉರುಳು ಸೇವೆ ಮಾಡುವವರು ವಸ ಬದಲಿಸಲು ಅನುಕೂಲವಾಗುವಂತೆ ಕೊಠಡಿಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.

    ಈ ವೇಳೆ ರಾಜ್ಯದ ಎಲ್ಲಾ ಎ ಮತ್ತು ಅವಶ್ಯವಿರುವ ಬಿ ದರ್ಜೆ ದೇವಾಲಯದಲ್ಲಿ ಇದೇ ಮಾದರಿಯಲ್ಲಿ ಮಕ್ಕಳಿಗೆ ಹಾಲುಣಿಸುವ ಕೇಂದ್ರಗಳನ್ನು ನಿರ್ಮಿಸುವಂತೆ ಶ್ರೀ ಬನಶಂಕರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ವತಿಯಿಂದ ಮುಜರಾಯಿ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು ಈ ಸಂಬಂಧ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದರು.

    ಉಚಿತ ನೇತ್ರ ತಪಾಸಣಾ ಶಿಬಿರ: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಎಚ್. ಬಸವರಾಜು ಮಾತನಾಡಿ, ದೇವಾಲಯದಲ್ಲಿ ಧಾರ್ಮಿಕ ಕೈಂಕರ್ಯದ ಜೊತೆಗೆ ಸಾಮಾಜಿಕ ಚಟುವಟಿಕೆಗಳನ್ನೂ ಹಮ್ಮಿಕೊಳ್ಳಲಿದ್ದು, ಪ್ರತಿ ತಿಂಗಳು ಕೊನೆಯ ಶುಕ್ರವಾರ ದೇವಾಲಯದ ಆವರಣದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸುವುದಾಗಿ ಹೇಳಿದರು.

    ಈ ವೇಳೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ, ಶ್ರೀನಿವಾಸ ಮೂರ್ತಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts