More

    ಬನಶಂಕರಿ ದೇಗುಲದ ವ್ಯವಸ್ಥಾಪನಾ ಸಮಿತಿ ರದ್ದು

    ಬೆಂಗಳೂರು: ರಾಜಧಾನಿಯ ಶ್ರೀ ಬನಶಂಕರಿ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ರಾಜ್ಯ ಧಾರ್ಮಿಕ ದತ್ತಿ ಇಲಾಖೆ ರದ್ದುಪಡಿಸಿದೆ.

    ಬನಶಂಕರಿ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸುವುದಕ್ಕೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಕಾಯ್ದೆ 2011ರ ಸೆಕ್ಷನ್ 25ರ ಅನ್ವಯ ರಾಜ್ಯ ಧಾರ್ಮಿಕ ಪರಿಷತ್ತಿನ ಘಟನೋತ್ತರ ಮಂಜೂರಾತಿ ಪಡೆಯುವ ಸಲುವಾಗಿ ಅ.13ರಂದು ನಡೆದ 4ನೇ ಧಾರ್ಮಿಕ ಪರಿಷತ್ತಿನ 1ನೇ ಸಭೆಯಲ್ಲಿ ವಿಷಯ ಮಂಡಿಸಲಾಗಿತ್ತು. ಆದರೆ ರಾಜ್ಯ ಧಾರ್ಮಿಕ ಪರಿಷತ್ತಿನ ಅನುಮೋದನೆ ಪಡೆಯದೆ ವ್ಯವಸ್ಥಾಪನಾ ಸಮಿತಿ ರಚಿಸಿದ್ದರಿಂದ ಕಳೆದ ಮಾರ್ಚ್ 17ರಲ್ಲಿ ವ್ಯವಸ್ಥಾಪನಾ ಸಮಿತಿ ರಚನೆಗೆ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲಾಗಿದೆ. ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತರು ಹಾಗೂ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

    ವ್ಯವಸ್ಥಾಪನಾ ಸಮಿತಿ ರದ್ದತಿಯಿಂದಾಗಿ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಸಗುಮವಾಗಿ ಸಾಗಲು 2011ರ ಕಲಂ 29ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಜಿಲ್ಲಾ ಆಡಳಿತಾಧಿಕಾರಿಯನ್ನು ನೇಮಿಸಿ, ಕೂಡಲೇ ದೇವಾಲಯದ ಪ್ರಭಾರ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts