25.5 C
Bangalore
Monday, December 16, 2019

ಬಾಂದ ಕೆರೆಗೆ ಬೇಕಿದೆ ಕಾಯಕಲ್ಪ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಭಾಗ್ಯವಾನ್ ಸನಿಲ್ ಹಳೆಯಂಗಡಿ
ಪಡುಪಣಂಬೂರು ಹಾಗೂ ಪಕ್ಕದ ಬೆಳ್ಳಾಯೂರು ಗ್ರಾಮದ ಕೃಷಿಕರ ಜಲಮೂಲವಾಗಿದ್ದ ಪಡುಪಣಂಬೂರು ಬಾಂದ ಕೆರೆಗೆ ಕಾಯಕಲ್ಪ ಒದಗಿಸುವಂತೆ ಸ್ಥಳಿಯರ ಆಗ್ರಹವಿದ್ದರೂ ಸರ್ಕಾರದ ನಿರ್ಲಕ್ಷೃದಿಂದ ಮೂಲೆಗುಂಪಾಗಿದೆ.

- Advertisement -

ಒಂದು ಎಕರೆ ಅಧಿಕ ವಿಸ್ತೀರ್ಣ ಹಾಗೂ 60 ಅಡಿ ಆಳವಿರುವ ಸುತ್ತಲೂ ಕೆಂಪು ಕಲ್ಲ ಕಟ್ಟೆಯ ರಚನೆ ಇರುವ ಈ ಬಾಂದ ಕೆರೆ ಕೃಷಿಕರ ಮೂರು ಬೆಳೆಗಳಿಗೆ ಆಶ್ರಯವಾಗಿದೆ. ಜತೆಗೆ ತನ್ನ ಒರತೆಗಳಿಂದ ಪಡುಪಣಂಬೂರು ಗ್ರಾಮದ ಹೆಚ್ಚಿನ ಬಾವಿಗಳಲ್ಲಿ ಮಳೆಗಾಲದವರೆಗೆ ನೀರು ಇರುವಂತೆ ನೋಡಿಕೊಳ್ಳುವ ಅತ್ಯುತ್ತಮ ಜಲಮೂಲವಾಗಿತ್ತು. ಕಾಲಕ್ರಮೇಣ ಜನರಲ್ಲಿ ಕೆರೆಗಳ ಬಗ್ಗೆ ಆಸಕ್ತಿ ಕುಂಠಿತವಾಗಿ ನಿರ್ವಹಣೆ ಕೊರತೆಯಿಂದ ಕೆರೆಯ ದಂಡೆಗಳು ಕುಸಿದು ಮಣ್ಣು, ಅವರಿವರು ತಂದು ಹಾಕಿದ ತ್ಯಾಜ್ಯ, ಕಸ, ಕಲ್ಲುಗಳು ಕೆರೆಯನ್ನು ಸೇರಿ 12 ಮೀಟರ್ ಎತ್ತರಕ್ಕೂ ಅಧಿಕ ಹೂಳು ತುಂಬಿದೆ. ಹೂಳು ಹಾಗೂ ಹಾವಸೆಗಳಿಂದ ತುಂಬಿದ ಈ ಕೆರೆಯಲ್ಲಿ ಇಂದಿಗೂ ಒರತೆ ಇದೆ. ಸರ್ಕಾರ ಗಮನಹರಿಸಿ ಕೆರೆಯನ್ನು ಮೂಲ ಸ್ವರೂಪಕ್ಕೆ ಧಕ್ಕೆ ಬರದ ಸ್ಥಿತಿಯಲ್ಲಿ ಅಭಿವೃದ್ಧಿಪಡಿಸಿದರೆ ಪಡುಪಣಂಬೂರು ಪಂಚಾಯಿತಿ ವ್ಯಾಪ್ತಿಯ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಿದೆ.

ನೀರಿನ ಸಂಕಷ್ಟ: ಈ ಮಳೆಗಾಲದಲ್ಲಿ ಅತಿವೃಷ್ಟಿಯಾಗಿದ್ದರೂ ಮಳೆ ಇಲ್ಲದ ದಿನಗಳಲ್ಲಿ ಬಾವಿಯ ನೀರು ಕೆಳಕ್ಕಿಳಿಯುವುದು ಸಾಮಾನ್ಯವಾಗಿದೆ. ಇದು ಭೂಮಿಯ ಅಂತರ್ಜಲದ ಕೊರತೆಯನ್ನು ಬಿಂಬಿಸುತ್ತದೆ. ಹಿಂದೆ ಭತ್ತದ ಕೃಷಿಗಾಗಿ ಕೆರೆ ಕೊಳ್ಳಗಳ ನೀರು ಉಪಯೋಗವಾಗುತ್ತಿತ್ತು. ಭತ್ತದ ಗದ್ದೆಗಳಿಂದ ಸಾಕಷ್ಟು ನೀರು ಇಂಗುತ್ತಿತ್ತು. ಇನ್ನು ಕೆರೆ, ಕೊಳ್ಳಗಳೂ ಅಂತರ್ಜಲ ವೃದ್ಧಿಗೆ ಪೂರಕವಾಗಿವೆ. ಆದರೆ ಇಂದು ಗದ್ದೆಗಳು ಸೈಟ್ ಆಗಿ ಪರಿವರ್ತಿತವಾಗಿವೆ, ಕೆರೆಗಳನ್ನು ಮುಚ್ಚಲಾಗುತ್ತಿದೆ. ಇವು ನೀರಿನ ಸಂಕಷ್ಟಕ್ಕೆ ದಾರಿ ಮಾಡುತ್ತಿದೆ ಎನ್ನುವುದು ಗ್ರಾಮದ ಹಿರಿಯರ ಮಾತು.

ನರೇಗಾದಿಂದ ಕಷ್ಟ: ಈ ಕೆರೆಯ ಸಂಪೂರ್ಣ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಅಗತ್ಯವಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಈ ಕಾಮಗಾರಿ ಸಾಧ್ಯವಿಲ್ಲ. ಸರ್ಕಾರದ ಕೆರೆ ಸಂಜೀವಿನಿ ಯೋಜನೆ ಇನ್ನೂ ಬಂದಿಲ್ಲ. ಪಂಚಾಯಿತಿ ಸಣ್ಣ ನೀರಾವರಿ ಇಲಾಖೆಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಒಟ್ಟಾರೆ ಈ ಕೆರೆಯ ಅಭಿವೃದ್ಧಿಯಿಂದ ಪಡುಪಣಂಬೂರು ಪಂಚಾಯಿತಿ ಕುಡಿಯುವ ನೀರಿನ ಬಗ್ಗೆ ಸ್ವಾವಲಂಬನೆ ಗಳಿಸಲಿದೆ ಎನ್ನುವುದು ಸಾರ್ವತ್ರಿಕ ಅಭಿಪ್ರಾಯ.

ಪಡುಪಣಂಬೂರು ಗ್ರಾಮಕ್ಕೇ ನೀರುಣಿಸುತ್ತಿದ್ದ ಕೆರೆ ಸರ್ಕಾದ ಉಪೇಕ್ಷೆಗೆ ಒಳಗಾಗಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ.
|ದುಗ್ಗಣ್ಣ ಸಾವಂತರು ಮೂಲ್ಕಿ ಸೀಮೆ ಅರಸರು
ಈ ಕೆರೆಯ ಅಭಿವೃದ್ಧಿಗೆ ಎಂಆರ್‌ಪಿಎಲ್‌ನವರನ್ನು ಸಂಪರ್ಕಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆಗೆ ಅಧಿಕಾರಿಗಳು ಭೇಟಿ ನೀಡಿ ಹೋಗಿರುವುದು ಬಿಟ್ಟರೆ ಯಾವುದೇ ರೀತಿಯ ಸ್ಪಂದನೆ ಲಭ್ಯವಾಗಿಲ್ಲ.
| ಮೋಹನ್‌ದಾಸ್ ತೋಕೂರು ಅಧ್ಯಕ್ಷರು, ಪಡುಪಣಂಬೂರು ಪಂಚಾಯಿತಿ
ನನ್ನ ಅಧ್ಯಕ್ಷಾವಧಿಯಲ್ಲಿ ಮೂಲ್ಕಿ ನಗರ ಪಂಚಾಯಿತಿಗೆ ಈ ಕೆರೆಯ ಅಭಿವೃದ್ಧಿಗಾಗಿ ಮನವಿ ಸಲ್ಲಿಸಲಾಗಿತ್ತು. ಈ ಕೆರೆ ಅಭಿವೃದ್ಧಿಪಡಿಸಿ ಮೂಲ್ಕಿ ಹಾಗೂ ಪಡುಪಣಂಬೂರು ಗ್ರಾಮದ ನೀರಿನ ಬವಣೆ ನಿವಾರಿಸಲು ವಿನಂತಿಸಲಾಗಿತ್ತು. ಆದರೆ ಮೂಲ್ಕಿ ನಗರ ಪಂಚಾಯಿತಿ ಈ ಬಗ್ಗೆ ಇನ್ನೂ ಸ್ಪಂದಿಸಿಲ್ಲ.
|ವಿನೋದ್ ಸಾಲ್ಯಾನ್ ಸದಸ್ಯರು, ಪಡುಪಣಂಬೂರು ಪಂಚಾಯಿತಿ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...