More

    ಎಸ್​​ಎಸ್​ಎಲ್​ಸಿ ಪರೀಕ್ಷಾರ್ಥಿಗಳಿಗಾಗಿ ರೇಡಿಯೋ ‘ಬಾನ್‌ದನಿ’ ಪ್ರಸಾರ; ಎಂದಿನಿಂದ ಎಲ್ಲಿಯವರೆಗೆ?

    ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ (2022-23) ವ್ಯಾಸಂಗ ಮಾಡುತ್ತಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ‘ಬಾನ್‌ದನಿ’ ಎಂಬ ರೇಡಿಯೋ ಪಾಠ ಪ್ರಸಾರವಾಗಲಿದೆ. ಫೆ.27ರಿಂದ ಮಾ.23ರ ವರೆಗೆ ಆಕಾಶವಾಣಿಯಿಂದ ‘ಬಾನ್‌ದನಿ’ ಪ್ರಸಾರ ಮಾಡಲಾಗುವುದು.

    ಗುಣಾತ್ಮಕ ಶಿಕ್ಷಣ ಗುರಿ ಸಾಧನೆಯೊಂದಿಗೆ ಡಿಜಿಟಲ್ ಉಪಕ್ರಮದ ಅಳವಡಿಕೆ ಹಾಗೂ ತರಗತಿ ಬೋಧನಾ-ಕಲಿಕಾ ಪ್ರಕ್ರಿಯೆಯಲ್ಲಿ ಏಕತಾನತೆಯನ್ನು ಹೋಗಲಾಡಿಸುವ ಉದ್ದೇಶದಿಂದ ರೇಡಿಯೊ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತಿದೆ.

    ಕಳೆದ ಡಿಸೆಂಬರ್‌ನಿಂದ 1ರಿಂದ 9ನೇ ತರಗತಿ ಮಕ್ಕಳಿಗೆ ನೀತಿ ಕತೆ, ಯೋಗ ಮತ್ತು ಆರೋಗ್ಯ ಶಿಕ್ಷಣ, ವೃತ್ತಿ ಶಿಕ್ಷಣ ಮತ್ತು ಶೈಕ್ಷಣಿಕ ಮಾರ್ಗದರ್ಶನ ಹಾಗೂ ಇಂಗ್ಲಿಷ್ ಕಲಿಕೆಯನ್ನು ಒಳಗೊಂಡ ಸಾಮಾನ್ಯ ಪಾಠಗಳು, 4 ಮತ್ತು 5ನೇ ತರಗತಿಗೆ ಕನ್ನಡ ಮತ್ತು ಗಣಿತ ವಿಷಯಗಳ ಪಾಠಗಳನ್ನು ಆಕಾಶವಾಣಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಧ್ಯಾಹ್ನ 2.35ರಿಂದ 3 ಗಂಟೆ ವರೆಗೆ ಪ್ರಸಾರ ಮಾಡಲಾಗುತ್ತಿದೆ.

    ಇದನ್ನೂ ಓದಿ: ಬೇರೆ ಏನನ್ನಾದರೂ ಬರೆದಿರುವ ನೋಟುಗಳನ್ನು ಸ್ವೀಕರಿಸುವಂತಿಲ್ಲವೇ?: ಇಲ್ಲಿದೆ ಸತ್ಯಾಂಶ

    ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆಗಾಗಿ ಬಾನ್‌ದನಿ ಕಾರ್ಯಕ್ರಮವು ಫೆ.27ರಿಂದ 13 ಆಕಾಶವಾಣಿ ಕೇಂದ್ರಗಳು ಹಾಗೂ 3 ವಿವಿಧ ಭಾರತಿ ಎಫ್​​ಎಂ ಕೇಂದ್ರಗಳಿಂದ ಏಕಕಾಲದಲ್ಲಿ ಪ್ರಸಾರವಾಗಲಿದೆ. ಇದರ ಜತೆಗೆ ಸಾಮಾನ್ಯ ಮೊಬೈಲ್​ಫೋನ್​, ಆಲ್ ಇಂಡಿಯಾ ರೇಡಿಯೋ ಬೆಂಗಳೂರು, ಯೂಟ್ಯೂಬ್ ಚಾನಲ್ ಹಾಗೂ ಪ್ರಸಾರಭಾರತಿ ನ್ಯೂಸ್ ಆನ್ ಏರ್‌ನಲ್ಲಿಯೂ ಕೇಳಿ ಅನಿಸಿಕೆ ಹಂಚಿಕೊಳ್ಳಬಹುದು.

    ಇದನ್ನೂ ಓದಿ: ರಾಜಧಾನಿಯಲ್ಲಿ ಬಿಬಿಎಂಪಿ ಖಾತಾ ಆಂದೋಲನ, ಆಸ್ತಿವಂತರಿಗೆ ಸದವಕಾಶ: ಎಂದಿನಿಂದ, ಎಲ್ಲೆಲ್ಲಿ?; ಇಲ್ಲಿದೆ ವಿವರ

    ಕಾರ್ಯಕ್ರಮವನ್ನು ವೇಳಾಪಟ್ಟಿ ಪ್ರಕಾರ ವಿದ್ಯಾರ್ಥಿಗಳಿಗೆ ಕೇಳಿಸಿ ಪಾಠಗಳ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಲು ಹಾಗೂ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಡಿಎಸ್‌ಇಆರ್‌ಟಿ ನಿರ್ದೇಶಕರು ಸೂಚಿಸಿದ್ದಾರೆ. ಪೂರ್ಣ ವೇಳಾಪಟ್ಟಿಗೆ ಡಿಎಸ್‌ಇಆರ್‌ಟಿ ವೇಬ್‌ಸೈಟ್ https://dsert.kar.nic.in ಭೇಟಿ ನೀಡಬಹುದು.

    ಮುಂದಿನ ಮುಖ್ಯಮಂತ್ರಿ ಯಾರು?; ಇದೊಂದೇ ಪ್ರಶ್ನೆಗೆ ಯುವಕರ ಮಧ್ಯ ಮಾರಾಮಾರಿ, ಕೊಲೆ ಬೆದರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts