More

    ಡಿ.5ಕ್ಕೆ ಕರ್ನಾಟಕ ಬಂದ್? – ಮರಾಠ ಅಭಿವೃದ್ಧಿ ನಿಗಮಕ್ಕೆ ತೀವ್ರ ಖಂಡನೆ

    ಬೆಂಗಳೂರು: ರಾಜ್ಯ ಸರ್ಕಾರ ಸ್ಥಾಪಿಸಿರುವ ‘ಮರಾಠ ಅಭಿವೃದ್ಧಿ ನಿಗಮ’ಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ನ.27ರೊಳಗೆ ಆದೇಶವನ್ನು ಹಿಂಪಡೆಯದಿದ್ದರೆ ಡಿ.5ಕ್ಕೆ ರಾಜ್ಯ ಬಂದ್​ಗೆ ಕರೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.

    ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಮಂಗಳವಾರ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮರಾಠ ಅಭಿವೃದ್ಧಿ ನಿಗಮ ರಚನೆಗೆ ನೀಡಿರುವ ಸಲಹೆಯೇ ಅವೈಜ್ಞಾನಿಕ. ಇದನ್ನು ಸಿಎಂ ಯಡಿಯೂರಪ್ಪ ಒಪ್ಪಿಕೊಂಡಿರುವುದು ಸರಿಯಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೌನ ಸರಿಯಲ್ಲ. ರಾಜ್ಯದಲ್ಲಿ ತಮಿಳು, ತೆಲುಗು, ಮಲೆಯಾಳಿ, ಗುಜರಾತಿ ಮತ್ತು ಉಳಿದ ಎಲ್ಲ ಭಾಷೆಗಳಿಗೂ ಸರ್ಕಾರ ಪ್ರಾಧಿಕಾರ ರಚಿಸಿದರೂ ಆಶ್ಚರ್ಯವಿಲ್ಲ ಎಂದು ಕಿಡಿಕಾರಿದರು.

    ಇದನ್ನೂ ಓದಿ: ಹತ್ತು ಕಿ.ಮೀ. ನಡೆದುಕೊಂಡು ಹೋಗಿ ಅಪ್ಪನ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ 11ರ ಬಾಲಕಿ !

    ಪ್ರತಿವರ್ಷ ರಾಜ್ಯೋತ್ಸವ ವೇಳೆ ಬೆಳಗಾವಿಯಲ್ಲಿ ಮರಾಠರ ಕ್ಯಾತೆಗಳು ಮೀತಿ ಮೀರುತ್ತಿದೆ. ಅನಗತ್ಯವಾಗಿ ಕನ್ನಡ ಭಾಷೆ ಮತ್ತು ರಾಜ್ಯ ಕುರಿತಂತೆ ಅವಹೇಳನಕಾರಿ ಹೇಳಿಕೆ ಮತ್ತು ಘಟನೆಗಳಿಗೆ ಮರಾಠಿಗರು ಪ್ರಯತ್ನ ಮುಂದುವರಿದಿದೆ. ಈ ಪರಿಸ್ಥಿತಿಯಲ್ಲಿಯೂ ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸುವ ಅನಿವಾರ್ಯತೆ ಸರ್ಕಾರಕ್ಕೆ ಏನಿತ್ತು ಎಂದು ಡಾ.ರಾಜ್​ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್ ಪ್ರಶ್ನಿಸಿದ್ದಾರೆ.

    ಕನ್ನಡ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಹಾಗೂ ಕನ್ನಡ ರಕ್ಷಣ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಹ ವಿರೋಧ ವ್ಯಕ್ತಪಡಿಸಿದೆ. ಸರ್ಕಾರದ ನಡೆಯನ್ನು ನ.27ರವರೆಗೆ ಕಾದು ನೋಡುವ ತಂತ್ರಕ್ಕೆ ಮುಂದಾಗಿವೆ.

    ದಾರುಲ್ ಉಲೂಮ್ ಹಕ್ಕಾನಿಯಾ ಪಾಕಿಸ್ತಾನದ ಜಿಹಾದಿಗಳ ವಿಶ್ವವಿದ್ಯಾಲಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts