More

    ನಾಳೆ ಬಂದ್ ನಡೆಸುವಂತೆ ಮುಸ್ಲಿಂ ಮುಖಂಡರ ಕರೆ; ಪೊಲೀಸ್ ಕಮಿಷನರ್ ಏನೆಂದರು?

    ಬೆಂಗಳೂರು: ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿ, ಸಮವಸ್ತ್ರ ಕಡ್ಡಾಯ ಎಂಬ ಸರ್ಕಾರದ ಆದೇಶವನ್ನು ಎತ್ತಿ ಹಿಡಿದು ಹೈಕೋರ್ಟ್ ನೀಡಿದ ತೀರ್ಪಿನಿಂದ ಅಸಮಾಧಾನಗೊಂಡಿರುವ ಮುಸ್ಲಿಂ ಮುಖಂಡರು ನಾಳೆ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ.

    ರಾಜಧಾನಿ ಬೆಂಗಳೂರಿನಲ್ಲೂ ಮುಸ್ಲಿಂ ಮುಖಂಡರು ಬಂದ್​ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮುಸ್ಲಿಂ ಮುಖಂಡರನ್ನು ಕರೆಸಿ ಸಭೆ ನಡೆಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಕಮಿಷನರ್ ತಾಕೀತು ಮಾಡಿದ್ದಾರೆ.

    ಇದನ್ನೂ ಓದಿ: ಕಾಲೇಜೇ ಸರಿ ಇಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

    ನಾಳೆ ಮುಸ್ಲಿಂ ಮುಖಂಡರು ಬಂದ್​ಗೆ ಕರೆ ಕೊಟ್ಟಿದ್ದಾರೆ. ಅವರು ನಾಳೆ ಹೊರಗಡೆ ಯಾವುದೇ ಕಾರ್ಯಕ್ರಮ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದಿಲ್ಲ, ಆಫೀಸ್​ಗೆ ಹೋಗುವವರನ್ನು ಬಲವಂತವಾಗಿ ತಡೆಯುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.

    ಇದನ್ನೂ ಓದಿ: ದುಷ್ಕರ್ಮಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್!

    ಅವರು ಭರವಸೆ ನೀಡಿದಾಗ್ಯೂ ಬಂದೋಬಸ್ತ್​ಗೆ ಸಾಕಷ್ಟು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಗಸ್ತಿನಲ್ಲಿ ಇರುತ್ತಾರೆ. ಕೆಲವು ಕಡೆ ರೂಟ್ ಮಾರ್ಚ್ ಮಾಡಲಾಗುವುದು. ಅಲ್ಲದೆ ಹೆಚ್ಚಿನ ಬಂದೋಬಸ್ತ್​ಗಾಗಿ 25 ಕೆಎಸ್​​ಆರ್​​ಪಿ ತುಕಡಿಗಳನ್ನು, 35 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಸತ್ತ ವಿದ್ಯಾರ್ಥಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts