25.1 C
Bangalore
Friday, December 6, 2019

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವಿಲ್ಲ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ನವದೆಹಲಿ: ಬಂಡೀಪುರ ಅಭಯಾರಣ್ಯದ ಸುರಕ್ಷಿತ ಬಫರ್ ವಲಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶವಿರಬಾರದು ಎಂಬ ಕರ್ನಾಟಕದ ವಾದಕ್ಕೆ ಸುಪ್ರೀಂಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದೆ.

ಬಂಡೀಪುರ ಅರಣ್ಯದಲ್ಲಿ ಸಾಗುವ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಕೇರಳ ಮೂಲದ ಅರ್ಜಿದಾರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರೋಹಿಂಟನ್ ನಾರಿಮನ್ ಮತ್ತು ನ್ಯಾ. ಸೂರ್ಯಕಾಂತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಅರಣ್ಯ ರಕ್ಷಣೆಯ ಪರ ಧೋರಣೆ ಹೊರಹಾಕಿತು. ‘ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಪರ್ಯಾಯ ಮಾರ್ಗದ ಬಗ್ಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿಕೊಳ್ಳಬೇಕಿದೆ ಮತ್ತು ಇದಕ್ಕೊಂದು ಶಾಶ್ವತ ಪರಿಹಾರ ಕಂಡು ಕೊಳ್ಳಬೇಕಿದೆ. ನಿಷೇಧವನ್ನು ಸದ್ಯಕ್ಕೆ ಮುಂದುವರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಪೀಠ, ಅರಣ್ಯ ರಕ್ಷಣೆಯ ಬಗೆಗಿನ ರಾಷ್ಟ್ರೀಯ ಹುಲಿ ರಕ್ಷಣಾ ಪ್ರಾಧಿಕಾರದ ವಾದಕ್ಕೂ ಸಮ್ಮತಿಸಿತು. ವಾಹನ ಸಂಚಾರಕ್ಕಾಗಿ ಪರ್ಯಾಯ ಮಾರ್ಗಕ್ಕೆ ಒತ್ತು ನೀಡುವುದು ಆದ್ಯತೆ ಆಗಬೇಕು. ಹೀಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಪರಿಸರ ಮತ್ತು ಅರಣ್ಯ ಸಚಿವಾಲಯದೊಂದಿಗೆ ಸಮಾಲೋಚನೆ ನಡೆಸಿ ರಾತ್ರಿ ವೇಳೆ ವಾಹನ ಸಂಚಾರ ಕುರಿತ ಅಭಿಪ್ರಾಯ ಒಳನ್ನೊಳಗೊಂಡ ಅಫಿಡವಿಟ್ ಅನ್ನು 4 ವಾರಗಳ ಒಳಗಾಗಿ ಸಲ್ಲಿಸಬೇಕು ಎಂದು ಆದೇಶಿಸಿತು.

ರಾಜ್ಯ ಸರ್ಕಾರದ ಪರ ವಾದಿಸಿದ ವಕೀಲ ಬಸವ ಪ್ರಭು ಪಾಟೀಲ್, ರಾತ್ರಿ ವೇಳೆ ವಾಹನಗಳ ಸಂಚಾರದಿಂದ ಸಾಕಷ್ಟು ವನ್ಯ ಮೃಗಗಳು ಸಾವಿಗೀಡಾಗಿರುವ ನಿದರ್ಶನಗಳಿವೆ. ಹೀಗಾಗಿ, ಯಾವುದೇ ಕಾರಣಕ್ಕೂ ನಿಷೇಧ ಹಿಂತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೇರಳ ಸರ್ಕಾರದ ಪರ ವಕೀಲ ಜಯದೀಪ್ ಗುಪ್ತಾ, ಸಂಚಾರ ನಿಷೇಧದಿಂದ ರಾಜ್ಯದ ಪ್ರವಾಸೋದ್ಯಮ, ವ್ಯಾಪಾರ, ಆರೋಗ್ಯ ಹಾಗೂ ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಆರೋಪಿದರು. ಆದರೆ ತಮಿಳುನಾಡು ಸರ್ಕಾರ ಕರ್ನಾಟಕದ ವಾದ ಬೆಂಬಲಿಸಿತು. ಕೊಳ್ಳೇಗಾಲದಿಂದ ಮೈಸೂರು ಮೂಲಕ ಕೇರಳದ ಕೋಝಿಕ್ಕೋಡ್​ನ್ನು ಸಂರ್ಪಸುವ ರಸ್ತೆಯೇ ಹೆಚ್ಚಿನ ಅರಣ್ಯ ಪ್ರದೇಶಕ್ಕೆ ಸಾಕ್ಷಿಯಾಗಿದೆ ಎಂದು

ನ್ಯಾಯಪೀಠಕ್ಕೆ ವಿವರಿಸಲಾಯಿತು. ಈ ವೇಳೆ ಬೇರೊಂದು ಪ್ರಕರಣದಲ್ಲಿ ವಾದ ಮಂಡನೆ ಸಲುವಾಗಿ ಕೋರ್ಟ್ ಹಾಲ್ ನಲ್ಲಿ ಹಾಜರಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಮಧ್ಯಪ್ರವೇಶಿಸಿ, ದೇಶದ ಹುಲಿ ಮೀಸಲು ಅರಣ್ಯ, ಅಭಯಾರಣ್ಯಗಳನ್ನು ಕಾಪಾಡುವುದು ಅತ್ಯವಶ್ಯಕ. ನಾವು ತೆಗೆದುಕೊಳ್ಳುವ ಕ್ರಮಗಳು ಅವುಗಳ ಬದುಕಿಗೆ ಹಾನಿಯುಂಟು ಮಾಡಬಾರದು ಎಂಬ ಕಾಳಜಿ ಹೊರಹಾಕಿದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...