More

    ಬಂದೋಬಸ್ತ್ ಇನ್ನಷ್ಟು ಬಿಗಿ ಮಾಡಿ- ಸಚಿವ ಜಗದೀಶ ಶೆಟ್ಟರ್‌

    ಬೆಳಗಾವಿ: ದೆಹಲಿಯ ಧಾರ್ಮಿಕ ಶಿಬಿರಕ್ಕೆ ಹೋಗಿ ಬಂದವರು ಮತ್ತು ಅವರೊಂದಿಗೆ ಸಂಪರ್ಕ ಸಾಧಿಸಿದವರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಜತೆಗೆ ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

    ಬೆಳಗಾವಿ: ದೆಹಲಿಯ ಧಾರ್ಮಿಕ ಶಿಬಿರಕ್ಕೆ ಹೋಗಿ ಬಂದವರು ಮತ್ತು ಅವರೊಂದಿಗೆ ಸಂಪರ್ಕ ಸಾಧಿಸಿದವರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಜತೆಗೆ ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ಹೇಳಿದರು.

    ಬೆಳಗಾವಿ ನಗರದ ಪ್ರಮಾಸಿ ಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮೂರು ಪಾಸಿಟಿವ್ ಪ್ರಕರಣ ಕಂಡುಬಂದಿದ್ದರಿಂದ ಸೋಂಕು ಹರಡದಂತೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    80 ಜನರ ಪತ್ತೆ : ದೆಹಲಿಗೆ ಹೋಗಿದ್ದ 96 ಮಂದಿಯಲ್ಲಿ 80 ಜನರ ಪತ್ತೆ ಮಾಡಲಾಗಿದ್ದು, ಉಳಿದ ಹದಿನಾರು ಜನರು ಬೇರೆ ಬೇರೆ ರಾಜ್ಯಗಳಲ್ಲಿ ಇದ್ದಾರೆ. ಅವರ ಬಗ್ಗೆ ಆಯಾ ರಾಜ್ಯಕ್ಕೆ ಮಾಹಿತಿ ನೀಡಲಾಗಿದೆ. 33 ಜನರ ಗಂಟಲು ದ್ರವ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 3 ಜನರ ವರದಿ ಪಾಸಿಟಿವ್ ಬಂದಿದ್ದು, 30 ನೆಗೆಟಿವ್ ವರದಿ ಬಂದಿವೆ. ಪಾಸಿಟಿವ್ ಇರುವ ಮೂವರ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಕೂಡ ಜಿಲ್ಲಾಡಳಿತ ಗುರುತಿಸಿ, ಅವರ ಆರೋಗ್ಯ ತಪಾಸಣೆ ಮಾಡಿ ನಿಗಾ ವಹಿಸಲಿದೆ ಎಂದರು.

    ಅನುಕೂಲ ಕಲ್ಪಿಸಲು ಸೂಚನೆ: ಲಾಕ್‌ಡೌನ್ ಸಮರ್ಪಕ ನಿರ್ವಹಣೆಗೆ ಜಿಲ್ಲೆಯಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಮತ್ತಿತರ ಕ್ರಮಗಳ ಮೂಲಕ ಪರಿಸ್ಥಿತಿ ನಿಯಂತ್ರಿಸಬೇಕು. ಜನರಿಗೆ ದಿನಬಳಕೆ ವಸ್ತುಗಳ ಪೂರೈಕೆಯಲ್ಲಿ ಯಾವುದೇ ಅನನುಕೂಲ ಆಗದಂತೆ ಕ್ರಮ ಕೈಗೊಳ್ಳಬೇಕು. ದಿನಸಿ, ತರಕಾರಿ ಮತ್ತಿತರ ಅಗತ್ಯವಿರುವ ಸಾಮಗ್ರಿಗಳನ್ನು ಸಮರ್ಪಕವಾಗಿ ಪೂರೈಸಲು ಈಗಿರುವ ವ್ಯವಸ್ಥೆ ಮುಂದುವರಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸಾಮಾನ್ಯ ವೈದ್ಯಕೀಯ ಸೇವೆಗೆ ಮುಂದಾಗುವ ಖಾಸಗಿ ವೈದ್ಯರು ಮತ್ತು ಕ್ಲಿನಿಕ್‌ಗಳಿಗೆ ಪಾಸ್ ಸೇರಿಂದತೆ ಅಗತ್ಯ ನೆರವು ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಶೆಟ್ಟರ್ ತಿಳಿಸಿದರು.

    ಸಹಾಯಧನಕ್ಕೆ ಚಿಂತನೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಪಡಿತರ ವಿತರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು ನೋಂದಣಿ ಮಾಡಿಕೊಂಡಿರದ ಕಾರ್ಮಿಕರಿಗೂ ಸರ್ಕಾರದ ಸಹಾಯಧನ ನೀಡುವ ಬಗ್ಗೆ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದರು.

    ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಅಭಯ ಪಾಟೀಲ, ಅನಿಲ ಬೆನಕೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಎಸ್ಪಿ ಲಕ್ಷ್ಮಣ ನಿಂಬರಗಿ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಇತರರು ಇದ್ದರು.

    ಜಿಲ್ಲೆಯಲ್ಲಿ ಹಾಲು ವಿತರಣೆಗೆ ಸಂಬಂಧಿಸಿದಂತೆ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಇರುವ ಕೊಳಗೇರಿಗಳಲ್ಲಿನ ಕುಟುಂಬಗಳ ಮಾಹಿತಿ ನೀಡಿದರೆ ಕೆಎಂಎಫ್ ಜತೆ ಮಾತನಾಡಿ ಅಗತ್ಯ ಇಂಡೆಂಟ್ ಸಲ್ಲಿಸಲಾಗುವುದು.
    | ಡಾ. ಕೆ.ವಿ. ರಾಜೇಂದ್ರ ಜಿಪಂ ಸಿಇಒ

    ಕರೊನಾ ವೈರಸ್ ಪ್ರಕರಣಗಳ ವಿಷಯದಲ್ಲಿ ಐಸೋಲೇಷನ್ ವಾರ್ಡ್‌ನಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗೆ ಅಗತ್ಯವಿರುವ ಸಾಮಗ್ರಿ ಪೂರೈಕೆ ಕುರಿತು ಮಾಹಿತಿ ಪಡೆದುಕೊಳ್ಳಲಾಗಿದೆ. ಲಾಕ್‌ಡೌನ್‌ನಿಂದ ಕಾರ್ಮಿಕರಿಗೆ, ಬಡವರಿಗೆ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.
    |ಸುರೇಶ ಅಂಗಡಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ

    ಬೆಳಗಾವಿಯಲ್ಲಿ ಕರೊನಾ ವೈರಸ್ ಪಾಸಿಟಿವ್ ಪ್ರಕರಣ ವರದಿಯಾಗಿರುವ ಹಿರೇಬಾಗೇವಾಡಿ, ಬೆಳಗುಂದಿ ಮತ್ತು ನಗರದ ಕ್ಯಾಂಪ್ ಪ್ರದೇಶದ ಕಸಾಯಿಗಲ್ಲಿಯನ್ನು ನಿಷೇಧಿತ ಪ್ರದೇಶ ಎಂದು ಸರ್ಕಾರ ಘೋಷಿಸಿದೆ. ಹೀಗಾಗಿ ಜನಸಂಚಾರ ಮತ್ತು ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಖಾಸಗಿ ವೈದ್ಯಕೀಯ ಸೇವೆ ನೀಡಲು ಮುಂದಾಗಿರುವ ವೈದ್ಯರಿಗೆ ಈಗಾಗಲೇ ಪಾಸ್ ವ್ಯವಸ್ಥೆ ಮಾಡಲಾಗಿದೆ.
    |ಡಾ. ಎಸ್.ಬಿ. ಬೊಮ್ಮನಹಳ್ಳಿ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts