More

    ಏರ್​ಪೋರ್ಟ್​ ಮೆಟ್ರೋ ಮಾರ್ಗಕ್ಕೆ ಕೇಂದ್ರದ ಅಸ್ತು!

    ಬೆಂಗಳೂರು: ನಮ್ಮ ಮೆಟ್ರೋ ವಿಮಾನನಿಲ್ದಾಣ ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಮೆಟ್ರೋ ಮಾರ್ಗಕ್ಕೆ ಸಂಬಂಧಿಸಿದಂತೆ ಸಿವಿಲ್ ಕಾಮಗಾರಿ ನಡೆಸಲು ಇದ್ದ ಅಡೆತಡೆ ನಿವಾರಣೆಯಾದಂತಾಗಿದೆ.

    ವಿಮಾನಯಾನ ಪ್ರಯಾಣಿಕರ ಅನುಕೂಲಕ್ಕಾಗಿ ಸಿಲ್ಕ್‌ಬೋರ್ಡ್ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಸಂಪರ್ಕಿಸುವಂತೆ ಬಿಎಂಆರ್‌ಸಿಎಲ್ ಯೋಜನೆ ರೂಪಿಸಿದೆ. ಆ ಯೋಜನೆಗೆ ಅನುಮೋದನೆ ಕೋರಿ ಕಳೆದ ಎರಡು ವರ್ಷಗಳ ಹಿಂದೆಯೇ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ನೀಡುವಲ್ಲಿ ವಿಳಂಬ ಮಾಡಿದ ಕಾರಣ ಸಿವಿಲ್ ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ.

    ಇದೀಗ ಕೇಂದ್ರ ಸಚಿವ ಸಂಪುಟ ಸಿಲ್ಕ್‌ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರ (2ಎ) ಮತ್ತು ಕೆ.ಆರ್.ಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ (2ಬಿ)ವರೆಗಿನ 58.19 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಅದರ ಜತೆಗೆ ಯೋಜನೆಗಾಗಿ 14,788 ಕೋಟಿ ರೂ. ವ್ಯಯಿಸುವುದಕ್ಕೂ ಒಪ್ಪಿಗೆ ಸೂಚಿಸಲಾಗಿದೆ.

    ಪೂರಕ ಸಿದ್ಧತೆಗಳು ಆರಂಭ:

    ವಿಮಾನ ನಿಲ್ದಾಣಕ್ಕೆ ಮೆಟ್ರೊ ಮಾರ್ಗ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡುವುದಕ್ಕೆ ಮುನ್ನವೇ ಬಿಎಂಆರ್‌ಸಿಎಲ್ ಯೋಜನೆಯ ಕಾಮಗಾರಿಗೆ ಅಗತ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಅಗತ್ಯ ಭೂಮಿಯನ್ನು ಈಗಾಗಲೆ ಸ್ವಾಧೀನ ಪಡಿಸಿಕೊಳ್ಳುವ ಕಾರ್ಯ ಪೂರ್ಣಗೊಳಿಸಿದೆ. ಅದರ ಜತೆಗೆ ಮಾರ್ಗ ನಿರ್ಮಾಣಕ್ಕೆ ಗುತ್ತಿಗೆದಾರರನ್ನು ನೇಮಿಸಲು ಟೆಂಡರ್ ಪ್ರಕ್ರಿಯೆ, ಮಾರ್ಗ ಸಾಗುವಲ್ಲಿನ ಯುಟಿಲಿಟಿಗಳ ಸ್ಥಳಾಂತರ ಕಾರ್ಯಕ್ಕೂ ಚಾಲನೆ ನೀಡಲಾಗಿದೆ.

    ಕೇಜ್ರಿವಾಲ್​ ಪತ್ನಿಗೆ ಕರೊನಾ ಸೋಂಕು; ಕ್ವಾರಂಟೈನ್​ಗೆ ಒಳಗಾದ ಸಿಎಂ

    ಯುಜಿಸಿ ನೆಟ್ ಪರೀಕ್ಷೆಗಳು ಮುಂದೂಡಿಕೆ: ಎನ್​ಟಿಎ ಘೋಷಣೆ

    bangalore airport metro

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts