More

    ನರ್ಸರಿ, ಎಲ್​ಕೆಜಿ, ಯುಕೆಜಿಗೆ ಇಂದಿನಿಂದ ಮುಂದಿನ ಆದೇಶದವರೆಗೆ ರಜೆ; ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ  

    ಬೆಂಗಳೂರು: ವಿಶ್ವಾದ್ಯಂತ ಹರಡುತ್ತ ಭೀತಿ ಸೃಷ್ಟಿಸಿರುವ ಕೊರೊನಾ ವೈರಸ್​ನಿಂದಾಗುವ ಅಪಾಯವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸೋಮವಾರದಿಂದ ಜಾರಿಗೆ ಬರುವಂತೆ ಬೆಂಗಳೂರು ಬೆಂಗಳೂರು ನಗರ ಮತ್ತು ಗ್ರಾಮಾಂತರದ ಎಲ್ಲ ಶಾಲೆಗಳ ನರ್ಸರಿ, ಎಲ್​ಕೆಜಿ ಹಾಗೂ ಯುಕೆಜಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಬೆಂಗಳೂರು ನಗರ ಮತ್ತು ಗ್ರಾಮಾಂತರದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಮುಂದಿನ ಆದೇಶದವರೆಗೆ ನರ್ಸರಿ, ಎಲ್​ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ರಜೆ ಇರಲಿದೆ.

    ಚೀನಾದ ವುಹಾನ್​ನಲ್ಲಿ ಸೃಷ್ಟಿಯಾಗಿ ಎಲ್ಲೆಡೆ ಹರಡುತ್ತಿರುವ ಕರೋನಾ ವೈರಸ್ ತುರ್ತು ಆರೋಗ್ಯ ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೊಷಿಸಿದೆ. ಇತ್ತೀಚೆಗೆ ಕೇರಳ, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ.

    ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನರ್ಸರಿ, ಎಲ್​ಕೆಜಿ ಹಾಗೂ ಯುಕೆಶಿ ತರಗತಿಗಳಿಗೆ ರಜೆ ನೀಡುವಂತೆ ಆರೋಗ್ಯ ಇಲಾಖೆ ಆಯುಕ್ತರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಮಾಡಿದ್ದರು. ಮನವಿಯನ್ನು ಪರಿಗಣಿಸಿರುವ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts