ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಧಾರವಾದ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಸಿದ್ದಗಂಗಾ ಎಕ್ಸ್‌ಪ್ರೆಸ್ ರೈಲಿನ ವಿದ್ಯುದೀಕರಣ ಪೂರ್ಣಗೊಳಿಸಿರುವುದಾಗಿ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಧಾರವಾಡ ಹಾಗೂ ಬೆಂಗಳೂರು ಪ್ರಯಾಣಿಕರಿಗೆ ಒಂದು ಸಿಹಿ ಸುದ್ದಿ . ಸಿದ್ದಗಂಗಾ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಡೀಸೆಲ್ ಇಂಜಿನ್ ರೈಲು ಈಗ ವಿದ್ಯುತ್ ರೈಲಾಗಿ ಪರಿವರ್ತಿಸಲಾಗಿದೆ. ಬೆಂಗಳೂರು-ಧಾರವಾಡ ನಡುವಿನ ಮೊದಲ ಎಲೆಕ್ಟ್ರಿಕ್ ರೈಲು ಇದಾಗಿದ್ದು, ಇದನ್ನು ಸಾಧ್ಯವಾಗಿಸಿದ ಪ್ಋಧಾನಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
Good news for Dharwad-Bengaluru passengers…
— Pralhad Joshi (@JoshiPralhad) December 1, 2023
The Siddaganga Intercity Express was a diesel engine train (12725/26) and has now been converted into an electric train. It made it's first electric journey from Bengaluru to Dharwad and will return to Bengaluru tomorrow. It will… pic.twitter.com/qsHTR4qb00