More

    ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆಯ ಸುಪರ್ದಿಗೆ: ಸರ್ಕಾರದಿಂದ ಆದೇಶ

    ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು ತೀರ್ಮಾನಿಸಿದೆ.

    ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ನಗರ ಆರೋಗ್ಯ ಅಭಿಯಾನದಡಿ ಪಟ್ಟಿ ಮಾಡಿದ 35 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪಟ್ಟಿ ಮಾಡದ 14 ನಗರ ಪ್ರಾಥಮಿಕ ಕೇಂದ್ರಗಳು ಹಾಗೂ 2 ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರಲಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ನಿರ್ವಹಣೆ ಒಂದೇ ರೀತಿ ನಡೆಯಬೇಕು. ಸರ್ಕಾರದ ಸೌಲಭ್ಯಗಳು ನಗರದ ಪ್ರದೇಶವಾಗಿರಲಿ, ಅಥವಾ ಹಳ್ಳಿಯೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯಲ್ಲಿ ಇರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಇದು ನೆರವಾಗಲಿದೆ ಎಂದರು.

    ಪಿಎಂ ಕಿಸಾನ್​ 11ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ: ಈ ದಿನಾಂಕದಂದು ಹಣ ಜಮೆಯಾಗಲಿದೆ

    ಕೊಡಗಿನಲ್ಲಿ ಭಾರೀ ಮಳೆ,ಬಿರುಗಾಳಿಗೆ ಹಾರಿಹೊದ ಮನೆಯ ಮೇಲ್ಛಾವಣಿ, ಕುಸಿದ ಮನೆ ಗೋಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts