ಬೆಂಗಳೂರು -ಮೈಸೂರು ಹೆದ್ದಾರಿ ಸಂಚಾರ ತಡೆ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಮದ್ದೂರು: ಬೆಳಗಾವಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, 4 ವರ್ಷದಿಂದ ನೀನು ಎಲ್ಲಿ ಮಲಗಿದ್ದೆ? ಎಂದು ಪ್ರಶ್ನಿಸುವ ಮೂಲಕ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ರೈತ ಸಂಘದವರು ಸೋಮವಾರ ಶಿವಪುರದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ಮಾಡಿದರು.
ಹೆದ್ದಾರಿಯಲ್ಲಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಬ್ಬು ಬೆಳೆಗಾರರು ಮತ್ತು ರೈತ ಮಹಿಳೆಯ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಮುಖ್ಯಮಂತ್ರಿ ಅವರು ರೈತ ಮಹಿಳೆಯ ಕ್ಷಮೆಯಾ ಚಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ನೇತೃತ್ವವಹಿಸಿದ್ದ ರೈತ ಮುಖಂಡ ವರದಪ್ಪ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಬ್ಬು ಬೆಳೆಗಾರರು ಮತ್ತು ರೈತ ಮಹಿಳೆ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ. ಮುಖ್ಯಮಂತ್ರಿಯಾದ ದಿನಂದಿಂದ ರೈತ ಪರವಾದ ಸರ್ಕಾರ ಎಂದು ಹೇಳುತ್ತಾ ಒಂದಲ್ಲ ಒಂದು ಸುಳ್ಳುಗಳನ್ನು ಹೇಳಿಕೊಂಡು ರೈತರಿಗೆ ವಂಚನೆ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೆ ವಚನ ಭ್ರಷ್ಟರಾಗಿದ್ದಾರೆ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿ ಸಿದರು. ಸಿಎಂ ರೈತರ ಸಂಘದ ಮತ್ತು ರೈತ ಮಹಿಳೆಯ ಕ್ಷಮೆ ಕೇಳದೆ ಹೋದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರಸ್ತೆ ಸಂಚಾರ ನಡೆಸಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ರೈತ ಮುಖಂಡರಾದ ಸೀತಾರಾಮು, ಶ್ರೀನಿವಾಸ, ಲಿಂಗಪ್ಪಾಜಿ, ಅಶೋಕ್, ಸಿದ್ದೇಗೌಡ, ನಾಗರಾಜು, ಶ್ರೀಕಂಠ, ಮಹೇಶ್, ಮಹೇಂದ್ರ, ರಾಮಣ್ಣ, ಉಮೇಶ್ ಪ್ರತಿಭಟನೆಯಲ್ಲಿ ಭಾ ಗವಹಿಸಿದ್ದರು.

ಡಿ ಗ್ರೂಪ್ ನೌಕರರಿಂದ ಪ್ರತಿಭಟನೆ (ಮದ್ದೂರು): ವೇತನ ನೀಡುತ್ತಿಲ್ಲ ಎಂದು ಆರೋಪಿಸಿ ಪಟ್ಟಣದ ಕೆ.ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಹೊರ ಗುತ್ತಿಗೆ ಡಿ ಗ್ರೂಪ್ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಸೋಮವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ವೇತನ ನೀಡದ ಗುತ್ತಿಗೆದಾರ ಹಾಗೂ ವೇತನ ಕೊಡಿಸದ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎನ್.ಪ್ರಭು ಮಾತನಾಡಿ, 9 ತಿಂಗಳಿನಿಂದ 22 ಮಂದಿ ಹೊರಗುತ್ತಿಗೆ ಡಿ ಗ್ರೂಪ್ ನೌಕರರಿಗೆ ವೇತನ ನೀಡುತ್ತಿಲ್ಲ. ಇಎಸ್‌ಐ, ಪಿಎಫ್ ನೀಡುತ್ತಿಲ್ಲ. ಇದರಿಂದ ನಾವು ಜೀವನ ನಡೆಸುವುದು ಕಷ್ಣವಾಗಿದೆ. ಈ ವಿಷಯವನ್ನು ಸಂಬಂಧಿಸಿದ ಗುತ್ತಿಗೆದಾರರಿಗೆ, ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ವೇತನ ನೀಡುವ ತನಕ ಕರ್ತವ್ಯಕ್ಕೆ ಹಾಜರಾಗದೆ ಆಸ್ಪತ್ರೆಯ ಆವರಣದಲ್ಲಿ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದರು. ಚೇತನ, ನಯನ, ರಾಧಾ, ರಸಿಕಲಾ, ಇಂದುಮತಿ, ಸೌಮ್ಯ, ರಮೇಶ್, ಶೋಭಾ, ಮಂಜೇಶ್, ಜಮುನಾ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಿಎಂ ಹೇಳಿಕೆ ಖಂಡಿಸಿ ಹೆದ್ದಾರಿ ಸಂಚಾರ ತಡೆ( ಪಾಂಡವಪುರ): ರೈತರು ಮತ್ತು ಮಹಿಳೆಯ ಬಗ್ಗೆ ಲಘುವಾಗಿ ಮಾತನಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗಳನ್ನು ಖಂಡಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ಹೆದ್ದಾರಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಜಮಾವಣೆಗೊಂಡು 10 ನಿಮಿಷಗಳ ಕಾಲ ರಸ್ತೆ ಸಂಚಾರ ತಡೆ ನಡೆಸಿ, ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಬಿಜೆಪಿ ರೈತಮೋರ್ಚಾದ ತಾಲೂಕು ಅಧ್ಯಕ್ಷ ನೀಲನಹಳ್ಳಿ ಧನಂಜಯ ಮಾತನಾಡಿ, ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಕುಮಾರಸ್ವಾಮಿ, ರೈತರನ್ನು ಗೂಂಡಾ ಎಂದು ಜರಿದಿದ್ದಾರೆ. ಅಲ್ಲದೆ ಮಹಿಳೆಗೆ ಕನಿಷ್ಠ ಗೌರವವನ್ನು ಕೊಡದೆ ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ. ಇಂತವರು ರಾಜ್ಯ ಆಳಲು ಸಮರ್ಥರಲ್ಲ. ಕೂಡಲೇ ರಾಜೀನಾಮೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ತಾಲೂಕು ಅಧ್ಯಕ್ಷ ಪ.ಮ.ರಮೆಶ್, ಎಸ್ಸಿ/ಎಸ್‌ಟಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ನಾಯಕ, ಪುರಸಭೆ ಸದಸ್ಯ ಅಶೋಕ್, ಕೆ.ಎಲ್.ಆನಂದ್, ಚಿಕ್ಕಮರಳಿ ನವೀನ್‌ಕುಮಾರ್ ಇತರರು ಇದ್ದರು.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....