More

    ಮೂಗು ಓಪನ್ ಆಗುವಂತೆ ಗುದ್ದಿ, ಕಾಲಿನಿಂದ ಮರ್ಮಾಂಗಕ್ಕೆ ತುಳಿದು ಚಿತ್ರಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆ; ದರ್ಶನ್‌ ಅರೆಸ್ಟ್‌

    ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಪೊಲೀಸರು ದರ್ಶನ್‌, ಪವಿತ್ರಾಗೌಡ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ.

    ಸತ್ವ ಅನುಗ್ರಹ ಅಪಾರ್ಟ್ ಮೆಂಟ್ ನ ಮುಂಭಾಗದಲ್ಲಿರುವ ಮೋರಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಸಂಬಂಧ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. ಈ ಪ್ರಕರಣ ಬೆನ್ನು ಹತ್ತಿದ್ದ ಪೊಲೀಸರಿಗೆ ಸಿಕ್ಕಿದ್ದೆ ನಟ ದರ್ಶನ್‌.

    ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಯನ್ನ ಮೈಸೂರಿಗೆ ಕರೆತಂದು ಹಲ್ಲೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ದರ್ಶನ್ ಬೌನ್ಸರ್ಸ್ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಮೈಸೂರಿನಿಂದ ಬೆಂಗಳೂರಿಗೆ ಬಂದು ಬಿಸಾಡಿದ್ದರು ಎನ್ನಲಾಗುತ್ತಿದೆ.

    ಮುಖ, ತಲೆ ಹಾಗೂ ಕಿವಿಗೆ ತೀವ್ರವಾದ ಹಲ್ಲೆ ಮಾಡಲಾಗಿತ್ತು. ರೇಣುಕಾಸ್ವಾಮಿಯನ್ನು ಅಮಾನವೀಯವಾಗಿ ಹೊಡೆದು ಕೊಲ್ಲಲಾಗಿದೆ. ಮುಖದ ಮೂಳೆ ಮುರಿಯಲಾಗಿದೆ. ಮೂಗು ಓಪನ್ ಆಗುವಂತೆ ಗುದ್ದಿದ್ದಾರೆ. ಎದೆಯ ಎಡ ರಿಬ್ ಕಟ್ ಆಗುವಂತೆ ಹಲ್ಲೆ ಮಾಡಿದ್ದಾರೆ. ಕಾಲು ಮತ್ತು ಕೈಗೆ ಬ್ಯಾಟ್ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ, ಕಾಲಿನಿಂದ ಮರ್ಮಾಂಗಕ್ಕೆ ತುಳಿದಿದ್ದಾರೆ. ರಾಕ್ಷಸರಂತೆ ರೇಣುಕಾಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ. ಪರಿಣಾಮ ಯುವಕ ನರಳಿ ಸಾವನ್ನಪ್ಪಿದ್ದಾನೆ.

    ಮೃತನ ಜೇಬಲ್ಲಿ ಸಿಕ್ಕ ಆಧಾರ್ ಕಾರ್ಡ್ ನಿಂದ ಕೇಸ್ ಟ್ರೇಸ್ ಮಾಡಿದ್ದಾರೆ. ಯುವಕನ ಫೋನ್​ ನಂಬರ್​ ಮೇಲೆ ತನಿಖೆ ಕೈಗೊಂಡಿದ್ದಾರೆ. ಈ ವೇಳೆ ನಟ ದರ್ಶನ್ ಹೆಸರು ತಲುಕುಹಾಕಿದೆ. ​ IPC 1860 (U/s-302,201) ಅಡಿಯಲ್ಲಿ ಕೇಸ್ ದಾಖಲಿಸಿದ್ದ ಪೊಲೀಸರು ದರ್ಶನ್​ ಅವರನ್ನು ಅರೆಸ್ಟ್​ ಮಾಡಿದ್ದು, ಸದ್ಯ ತನಿಖೆ ನಡೆಸುತ್ತಿದ್ದಾರೆ.

    ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts