

ಬಳ್ಳಾರಿ: ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿನ ಗಲಭೆಗೆ ಸಂಬಂಧಪಟ್ಟ 80 ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ನಗರದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.11ರ ರಾತ್ರಿ ಬೆಂಗಳೂರಿನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಉದ್ರಿಕ್ತ ಗುಂಪು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ, ಪೊಲೀಸ್ ಠಾಣೆಗೂ ಬೆಂಕಿ ಇಟ್ಟು ದಾಂಧಲೆ ನಡೆಸಿತ್ತು. ಸಾರ್ವಜನಿಕರ, ಪೊಲೀಸರ ವಾಹನಕ್ಕೂ ಬೆಂಕಿ ಇಟ್ಟು ಮನಸೋಇಚ್ಛೆ ಹಲ್ಲೆ ನಡೆಸಿತ್ತು.