More

    ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ ಜೆಡಿಎಸ್ ಸಾಥ್; ಕುಮಾರಸ್ವಾಮಿ ಬೆಂಬಲ ಕೋರಿರುವ ಸಿ.ಪಿ. ಯೋಗೇಶ್ವರ್?

    ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯ ರಾಜಕೀಯದಲ್ಲಿ ವಿಚಿತ್ರ ಸನ್ನಿವೇಶಗಳು ಸೃಷ್ಟಿಯಾಗುತ್ತಿವೆ. ಹಾವು-ಮುಂಗುಸಿಯಂತಿದ್ದವವರು ಹಾಯ್-ಬಾಯ್ ಹೇಳುವ ಸ್ಥಿತಿ ಸೃಷ್ಟಿಯಾಗಿದೆ.

    ಲೋಕಸಭೆ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ತೊಡೆತಟ್ಟಲು ತಯಾರಿ ಮಾಡಿಕೊಳ್ಳುತ್ತಿವೆ.
    ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರನ್ನು ಕಟ್ಟಿಹಾಕಲು ಜೆಡಿಎಸ್ ನಾಯಕರು ಬಿಜೆಪಿಗೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

    ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿರುವ ಸಿ.ಪಿ.ಯೋಗೇಶ್ವರ್ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಲವು ತೋರಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಪ್ರಭಾವ ಹೆಚ್ಚಿರುವುರಿಂದ ಅವರನ್ನು ಬುಟ್ಟಿಗೆ ಹಾಕಿಕೊಳ್ಳುವ ತಂತ್ರಗಾರಿಕೆಯೂ ನಡೆಯುತ್ತಿದೆ.

    ದುಬೈ ಒಕ್ಕಲಿಗರ ಸಂಘ ಆಯೋಜಿಸಿದ್ದ ಕೆಂಪೇಗೌಡ ಉತ್ಸವದ ಒಂದೇ ವೇದಿಕೆಯಲ್ಲಿ ಭಾಗಿಯಾಗಿದ್ದ ಕುಮಾರಸ್ವಾಮಿ ಮತ್ತು ಸಿ.ಪಿ.ಯೋಗೇಶ್ವರ್ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ ಎಂಬ ಸುದ್ದಿಯೂ ಇದೆ. ಯೋಗೇಶ್ವರ್ ಅವರನ್ನು ಲೋಕಸಭೆಗೆ ಕಳುಹಿಸಿದರೆ ಕುಮಾರಸ್ವಾಮಿಗೆ ಚನ್ನಪಟ್ಟಣದ ಗೆಲುವಿನ ದಾರಿ ಸಲೀಸಲಾಗುತ್ತದೆ. ಜತೆಗೆ ಡಿ.ಕೆ.ಶಿವಕುಮಾರ್‌ಗೆ ಠಕ್ಕರ್ ಕೊಟ್ಟ ಹಾಗಾಗುತ್ತದೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಹಾಗಾಗುತ್ತದೆ ಎಂಬ ಲೆಕ್ಕಾಚಾರ ಈ ಮಾತುಕತೆ ಹಿಂದಿದೆ.

    ರಮೇಶ್ ಜಾರಕಿಹೊಳಿ ಮಧ್ಯಸ್ಥಿಕೆ

    ಸಿ.ಪಿ.ಯೋಗೇಶ್ವರ್ ಅವರು ಈ ರಂಣತಂತ್ರವನ್ನು ತಮ್ಮ ಆಪ್ತ ಸ್ನೇಹಿತ ಶಾಸಕ ರಮೇಶ್ ಜಾರಕಿಹೊಳಿ ಮೂಲಕ ಹೆಣೆದಿದ್ದಾರೆ. ಕುಮಾರಸ್ವಾಮಿ ಅನಾರೋಗ್ಯದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಗಳನ್ನು ಮೈತ್ರಿ ಮಾತುಕತೆ ಸಂದರ್ಭದಲ್ಲಿ ಪ್ರಸ್ತಾಪಿಸದಂತೆ ಅವುಗಳನ್ನು ಬಿಜೆಪಿಗೆ ಬಿಡುವಂತೆ ಹಾಗೂ ಈ ಕ್ಷೇತ್ರಗಳಲ್ಲಿ ಸಿ.ಪಿ.ಯೋಗೇಶ್ವರ್ ಹಾಗೂ ಡಾ.ಸುಧಾಕರ್ ಅವರಿಗೆ ಸಪೋರ್ಟ್ ಮಾಡುವಂತೆ ಪ್ರಸ್ತಾಪ ಮುಂದಿಟ್ಟದ್ದರು ಎನ್ನಲಾಗಿದೆ. ಅದರ ಭಾಗವಾಗಿ ದುಬೈ ಪ್ರವಾಸದಲ್ಲಿ ಕಡುವೈರಿಗಳಿಂತಿದ್ದ ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ನಡುವೆ ಮಾತುಕತೆ ನಡೆದಿದೆ ಎಂಬ ಗುಸುಗುಸು ರಾಜಕೀಯ ಪಡಸಾಲಯಲ್ಲಿ ಕೇಳಿ ಬರುತ್ತಿದೆ.

    ದುಬೈನಲ್ಲಿ ಡಿಕೆಸು ಸೋಲಿಸಲು ತಂತ್ರ

    ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರನ್ನು ಸೋಲಿಸುವುದು ಮೈತ್ರಿ ಪಕ್ಷಗಳ ಮುಖ್ಯ ಗುರಿಯಾಗಿದೆ. ಹಾಗಾಗಿ ಚನ್ನಪಟ್ಟಣ ನಾಯಕರು ದುಬೈ ಭೇಟಿ ಕಾರ್ಯಕ್ರಮವನ್ನು ಬಳಸಿಕೊಂಡಿದ್ದಾರೆ ಎಂದು ಹೇಳಲಾಗುತ್ತದೆ.
    ಮೈತ್ರಿ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಬಿಡುವಂತೆ ಹಾಗೂ ತಮ್ಮನ್ನು ಬೆಂಬಲಿಸುವಂತೆ ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ ಎಂಬ ಸುದ್ದಿಯೂ ಇದ್ದು, ಕುಮಾರಸ್ವಾಮಿ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts