More

    ನ. 19ರಿಂದ 21, ಬೆಂಗಳೂರು ಟೆಕ್ ಸಮ್ಮಿಟ್; ಸಂಪೂರ್ಣ ವರ್ಚುವಲ್

    ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ವರ್ಚುವಲ್ ಮೂಲಕ ನಡೆಯಲಿದ್ದು, ನ. 19ರಂದು ಪ್ರಧಾನಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

    ಸಮ್ಮಿಟ್​ನಲ್ಲಿ 80 ವಿದೇಶಿ ವಿಷಯ ಪರಿಣತರು ಸೇರಿ ಒಟ್ಟು 250 ವಿಷಯ ಪರಿಣತರಿಂದ ವಿಷಯ ಮಂಡನೆ. ಕೃತಕ ಬುದ್ಧಿಮತ್ತೆ, ಇಂಟರ್ನೆಟ್ ಆಫ್ ಥಿಂಗ್, ವರ್ಚುವಲ್ ರಿಯಾಲಿಟಿ, ಬ್ಲಾಕ್ ಚೇನ್​ನಂಥ ತಂತ್ರಜ್ಞಾನ ಮತ್ತು ಆವಿಷ್ಕಾರ ಹಾಗೂ ವೈಮಾಂತರಿಕ್ಷ, ರಕ್ಷಣಾ ತಂತ್ರಜ್ಞಾನ, ಆರೋಗ್ಯ ರಕ್ಷಣೆ, ನವೋದ್ಯಮ ಸೇರಿ ಇನ್ನಿತರ ಕ್ಷೇತ್ರಗಳ ಬಗ್ಗೆ ವಿಷಯ ಮಂಡನೆ, ಚರ್ಚೆ ನಡೆಯಲಿವೆ ಎಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

    ಸಂಪೂರ್ಣ ವರ್ಚುವಲ್: ಶೃಂಗಸಭೆಯಲ್ಲಿ ಕೆನಡಾ, ಫ್ರಾನ್ಸ್, ಜರ್ಮನಿ, ಬ್ರಿಟನ್ ಸೇರಿ 16 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅವರೆಲ್ಲರೂ ವರ್ಚುವಲ್ ಮೂಲಕ ಭಾಗವಹಿಸಲಿದ್ದಾರೆ. 70 ಅಧಿವೇಶನ, 250ಕ್ಕೂ ಹೆಚ್ಚಿನ ಪ್ರದರ್ಶಕರು, ದೇಶ, ವಿದೇಶಗಳ 4 ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts