More

    ಬೆಂದಕಾಳೂರು ಥಂಡಾ: 10 ವರ್ಷಗಳ ನಂತರ ಬೆಂಗಳೂರಲ್ಲಿ ಅತಿ ಕಡಿಮೆ ಉಷ್ಣಾಂಶ!

    ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಇನ್ನಷ್ಟು ಉಷ್ಣಾಂಶ ಕುಸಿತವಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಹತ್ತು ವರ್ಷಗಳ ನಂತರ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದೆ.

    2012ರ ನವೆಂಬರ್‌ನಲ್ಲಿ ಕನಿಷ್ಠ ತಾಪಮಾನದಲ್ಲಿ ಬೆಂಗಳೂರಿನಲ್ಲಿ 13.3 ಡಿಗ್ರಿ ಸೆಲ್ಸಿಯಸ್​ ದಾಖಲಾಗಿತ್ತು. ಸೋಮವಾರ (ನ.21) ಬೆಂಗಳೂರು ಜಿಕೆವಿಕೆಯಲ್ಲಿ 10.6 ಡಿ.ಸೆ. ದಾಖಲಾಗಿದೆ. ಇದು 10 ವರ್ಷಗಳಲ್ಲಿ ಅತಿ ಕಡಿಮೆ ಉಷ್ಣಾಂಶ ಎನ್ನಲಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನದಲ್ಲಿ 7.6, ಬಾದಾಮಿ 8.2, ಬೆಳಗಾವಿ 10.2, ಧಾರವಾಡ ಮತ್ತು ಗದಗ ತಲಾ 10.5, ಮಡಿಕೇರಿ 13.0, ಮಂಡ್ಯ 13.4 ಡಿ.ಸೆ. ಉಷ್ಣಾಂಶ ದಾಖಲಾಗಿದೆ.

    ಕಳೆದೊಂದು ವಾರದಿಂದ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ತೀವ್ರಗೊಂಡಿದೆ. ರಾತ್ರಿ ಹಾಗೂ ಬೆಳಗಿನ ಜಾವದಲ್ಲಿ ಹೆಚ್ಚು ಚಳಿ ಕಾಣಿಸಿಕೊಳ್ಳುತ್ತಿದೆ. ಮೂರ್ನಾಲ್ಕು ದಿನಗಳ ಕಾಲ ಚಳಿ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವದಿಂದ ತಂಪು ಮಾರುತಗಳು ಬೀಸುತ್ತಿರುವ ಕಾರಣದಿಂದ ಈ ಚಳಿ ಪ್ರಮಾಣ ಹೆಚ್ಚಾಗಿದೆ.

    ಹೋಟೆಲ್​ಗಳಲ್ಲಿ ಶೀಘ್ರವೇ ಬೆಲೆ ಹೆಚ್ಚಳ?; ಈಗಾಗಲೇ ಕೆಲವೆಡೆ ದರ ಪರಿಷ್ಕರಣೆ..

    ಸಿದ್ದರಾಮಯ್ಯ ಅರ್ಜಿ, ಹೈಕಮಾಂಡ್ ಮರ್ಜಿ: ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ?

    ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು; ಕತ್ತಲಲ್ಲಿ ಹರಿದ ಅಂಗಿಯಲ್ಲೇ ಪರಿಸ್ಥಿತಿ ವಿವರಿಸಿದ ಕುಮಾರಸ್ವಾಮಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts