20.4 C
Bengaluru
Sunday, January 19, 2020

ಪಾನಮತ್ತ ಚಾಲಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಪೊಲೀಸರ ಅಮಾನತು

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಬೆಂಗಳೂರು: ಪಾನಮತ್ತ ಚಾಲಕರಿಂದ ಕಾನೂನು ಬಾಹಿರವಾಗಿ ಹಣ ವಸೂಲಿ ಮಾಡುತ್ತಿದ್ದ ಅಶೋಕ್ ನಗರ ಸಂಚಾರ ಠಾಣೆಯ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಆದೇಶಿಸಿದ್ದಾರೆ.

ಅಶೋಕ್ ನಗರ ಸಂಚಾರ ಠಾಣೆಯ ಎಎಸ್ಐ ಮುನಿಯಪ್ಪ, ಸಂಚಾರ ಪೇದೆಗಳಾದ ಗಂಗರಾಜ್, ನಾಗರಾಜ್, ಹರ್ಷ ಅಮಾನತುಗೊಂಡವರು. ಜನವರಿ ತಿಂಗಳಿನಲ್ಲಿ ಎಎಸ್ಐ ಗಂಗರಾಜ್ ನಿವೃತ್ತರಾಗಲಿದ್ದರು.

ಖಾಸಗಿ ಆಲ್ಕೋ ಮೀಟರ್ ಮುಖಾಂತರ ಡ್ರಿಂಕ್ ಆ್ಯಂಡ್ ಡ್ರೈವ್ ಪರೀಕ್ಷೆ ನಡೆಸುತ್ತಿದ್ದರು. ನ್ಯಾಯಾಲಯದಲ್ಲಿ 15 ಸಾವಿರ ದಂಡ ಆಗುತ್ತೆ ಎಂದು ಹೆದರಿಸಿ ವಾಹನ ಸವಾರರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ವಿಶೇಷ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.

ಈ ಬಗ್ಗೆ ಸಾರ್ವಜನಿಕರಿಂದ ಪೊಲೀಸ್ ಆಯುಕ್ತರಿಗೆ ದೂರುಗಳು ಬಂದಿದ್ದವು. ಈ ದೂರಿನ್ವಯ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಅಶೋಕ ನಗರದ ಶ್ರೀನಿವಾಗಿಲು ಜಂಕ್ಷನ್ ಬಳಿ ಪಾನಮತ್ತರನ್ನ ತಪಾಸಣೆ ಮಾಡುತ್ತಿದ್ದ ಈ ನಾಲ್ವರು ಪೊಲೀಸರು ಸವಾರರಿಂದ ನಗದು ರೂಪದಲ್ಲಿ ಹಾಗೂ ಪೋನ್ ಪೇ ಮೂಲಕ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದರು.

ಸಂಚಾರ ಪೊಲೀಸರಿಂದ 32 ಸಾವಿರ ನಗದು, ಖಾಸಗಿ ಅಲ್ಕೋ ಮೀಟರ್, ಡಿಎಲ್​ಗಳನ್ನು ವಶಕ್ಕೆ ಪಡೆಯಲಾಗಿದೆ. ವಿವೇಕನಗರ ಪೊಲೀಸ್ ಠಾಣೆಯಲ್ಲಿ ನಾಲ್ವರು ಸಂಚಾರಿ ಪೊಲೀಸರ ವಿರುದ್ದ ದೂರು ದಾಖಲಾಗಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...