More

    ಬೆಂಗಳೂರು ವಿಶ್ವವಿದ್ಯಾಲಯ ಉದ್ಯೋಗ ಮೇಳ: 50ಕ್ಕೂ ವಿದ್ಯಾರ್ಥಿಗಳಿಗೆ ಉದ್ಯೋಗ

    ಬೆಂಗಳೂರು ಬೆಂಗಳೂರು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ, ಜೈವಿಕ ತಂತ್ರಜ್ಞಾನ ಮತ್ತು ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳಲ್ಲಿ 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ.

    ಬೆಂಗಳೂರು ವಿವಿ ಮತ್ತು ಮ್ಯಾಜಿಕ್ ಬಸ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮೇಳದಲ್ಲಿ 6 ಖಾಸಗಿ ಕಂಪನಿಗಳು ಭಾಗವಹಿಸಿದ್ದವು. ವಿವಿಯಲ್ಲಿ ಒಟ್ಟು 97 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 50 ಮಂದಿಗೆ ಸಂದರ್ಶನದ ನಡೆಸಿ ಉದ್ಯೋಗ ನೀಡಲಾಗಿದೆ.

    ಅಪೋಲೋ, ಮೆಡ್‌ಪ್ಲಸ್,ಐಟಿಸಿ, ಯೂನಿವರ್ಸಲ್ ಕಂಪನಿಗಳಲ್ಲಿ ಉದ್ಯೋಗ ದೊರೆತಿದ್ದು, 6ನೇ ಸೆಮಿಸ್ಟರ್ ಪರೀಕ್ಷಾ ಫಲಿತಾಂಶದ ಬಳಿಕ ಉದ್ಯೋಗಕ್ಕೆ ಸೇರಲಿದ್ದಾರೆ. ಮೇಳಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಸಿದ್ದು ತುಮಬಾ ಸಹಾಯವಾಯಿತು ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts