More

    ಬೆಂಗಳೂರಿಗೆ ನೀರಿನ ಸಮಸ್ಯೆ ನೀಗಿಸಲು 15 ಕಿ.ಮೀ. ವ್ಯಾಪ್ತಿಯ ನೀರಿನ ಮೂಲ ಬಳಸಿಕೊಳ್ಳಲು ಡಿಸಿಎಂ ಡಿಕೆಶಿ ಸೂಚನೆ

    ಬೆಂಗಳೂರು:
    ನಗರದಲ್ಲಿ ನೀರು ಇಲ್ಲದಿದ್ದರೆ 15 ಕಿ. ಮೀ ಸುತ್ತಮುತ್ತಲ ನೀರಿನ ಮೂಲಗಳನ್ನು ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
    ವಿಧಾನಸೌಧದಲ್ಲಿ ಬರ ಕುರಿತ ಸಭೆ ಬಳಿಕ ಮಾತನಾಡಿ, ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಆದರೂ, ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ ಎಂದರು.
    ಹೊಸಕೋಟೆ, ರಾಮನಗರ, ಚನ್ನಪಟ್ಟಣ, ಮಾಗಡಿ, ರಾಮನಗರದಿಂದ ದೊಡ್ಡ ಟ್ಯಾಂಕರ್‌ನಲ್ಲಿ ನೀರು ತರಲು ಸೂಚಿಸಿದ್ದೇವೆ ಎಂದರು.
    ಬೆಂಗಳೂರಿನಲ್ಲಿ ಈ ರೀತಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ನಾವು ಮೇಕೆದಾಟು ಯೋಜನೆ ಆಗ್ರಹಿಸಿ ನೀರಿಗಾಗಿ ನಡಿಗೆ ಪಾದಯಾತ್ರೆ ಮಾಡಿದೆವು. ಕೇಂದ್ರ ಸರ್ಕಾರ ಈಗಲಾದರೂ ಮೇಕೆದಾಟು ಯೋಜನೆಗೆ ಅನುಮತಿ ನೀಡಲಿ ಎಂದು ಆಗ್ರಹಿಸಿದರು.
    ಬರ ಪರಿಸ್ಥಿತಿಯಲ್ಲಿ ನೀರಿನ ಅಭಾವವನ್ನು ನೀಗಿಸಲು ಸಿಎಂ, ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಸೇರಿದಂತೆ ಎಲ್ಲಾ ಸಚಿವರು ಹಾಗೂ ಅಧಿಕಾರಿಗಳು ಚರ್ಚೆ ಮಾಡಿದ್ದೇವೆ ಎಂದರು.

    ನೋಂದಣಿಗೆ ಸೂಚನೆ:
    ಕೆಲವು ಟ್ಯಾಂಕರ್‌ಗಳು 600 ರೂ ಗೆ ನೀರು ನೀಡುತ್ತಿದ್ದಾರೆ. ಮತ್ತೆ ಕೆಲವರು 3 ಸಾವಿರಕ್ಕೂ ನೀಡುತ್ತಿದ್ದಾರೆ. ಹೀಗಾಗಿ ಎಲ್ಲರನ್ನೂ ನೋಂದಣಿ ಮಾಡಿಕೊಳ್ಳಲು ತಿಳಿಸಿದ್ದೇವೆ. ಎಲ್ಲರ ನೋಂದಣಿ ನಂತರ ಎಲ್ಲವನ್ನೂ ಒಂದು ವ್ಯವಸ್ಥೆ ಮೂಲಕ ನೀಡಲಾಗುವುದು. ನೀರನ್ನು ಎಷ್ಟು ದೂರದಿಂದ ತರಲಾಗಿದೆ ಎಂದು ನೋಡಿ ದರ ನಿಗದಿ ಮಾಡುತ್ತೇವೆ ಎಂದರು.
    ನೀರಿನ ಟ್ಯಾಂಕರ್ ವಶಕ್ಕೆ ತೆಗೆದುಕೊಳ್ಳುವುದರಿಂದ ಕೆಲವು ಅಪಾರ್ಟ್ಮೆಂಟ್‌ಗಳಿಗೆ ಸಮಸ್ಯೆ ಎದುರಾಗಲಿದೆ ಎಂಬ ವಿಚಾರವಾಗಿ ಕೇಳಿದಾಗ, ನಾವು ಎಲ್ಲರಿಗೂ ನೆರವು ನೀಡುತ್ತೇವೆ. ಅಪಾರ್ಟ್‌ಮೆಂಟ್‌ಗಳಿಗೂ ನಾವು ನೀರನ್ನು ಪೂರೈಸುತ್ತೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts