More

    ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಿ: ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸಲಹೆ

    ನೆಲಮಂಗಲ: ಸಾರ್ವಜನಿಕರ ಕುಂದುಕೊರತೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.


    ಗುರುವಾರ ಸಂಜೆ ನಗರ ತಾಲೂಕು ಕಚೇರಿಗೆ ಭೇಟಿ ನೀಡಿದ್ದ ವೇಳೆ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಜತೆಗೆ ಅವುಗಳ ಬಗ್ಗೆ ಅರಿವು ಮೂಡಿಸಬೇಕು. ಪಾರದರ್ಶಕ ಆಡಳಿತ ನಡೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸರ್ಕಾರ ನೀಡಿರುವ ಅದೇಶವನ್ನು ಪ್ರತಿಯೊಬ್ಬ ನಾಗರಿಕರು ಪಾಲಿಸಬೇಕು. ದೇಶಪ್ರೇಮದ ಜತೆಗೆ ಜನರ ದೇಶಭಕ್ತಿಯು ಹೆಚ್ಚಾಗುವ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ ಮಹತ್ವವಾಗಿದೆ. ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರತಿಯೊಬ್ಬ ಅಧಿಕಾರಿಗಳಿಗೆ ಜನಸಾಮಾನ್ಯರ ಸೇವೆ ಮಾಡಲು ಉತ್ತಮ ಅವಕಾಶ ದೊರೆತಿದ್ದು ಸದುಪಯೋಗಪಡಿಸಿಕೊಳ್ಳಬೇಕು ಎಂದರು.


    ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ: ಆ. 20ರಂದು ತಾಲೂಕಿನ ಮಣ್ಣೆ ಗ್ರಾಪಂನಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಪ್ರತಿಯೊಬ್ಬ ಅಧಿಕಾರಿಗಳು ಯಶಸ್ವಿಗೊಳಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸೇರಿ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆಗಮಿಸುತ್ತಿದ್ದು, ತಾಲೂಕು ಆಡಳಿತದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಕೆಲಸ ಅಧಿಕಾರಿಗಳು ಮಾಡುವಂತೆ ಪ್ರತಿಯೊಬ್ಬ ಅಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
    ಜಿಲ್ಲಾಧಿಕಾರಿ ಆರ್.ಲತಾ ಅವರನ್ನು ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts