More

    ಬಿಜೆಪಿಯಿಂದ ರಾಜ್ಯದಲ್ಲಿ ಸುಭದ್ರ ಸರ್ಕಾರ: ಸಚಿವ ಎಂಟಿಬಿ ನಾಗರಾಜ್ ಹೇಳಿಕೆ

    ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ಬಳಿಕ ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಸರ್ಕಾರ ಜನಸ್ನೇಹಿ ಆಡಳಿತ ನೀಡುತ್ತಿದೆ, ರಾಜ್ಯದಲ್ಲಿ ಸುಭದ್ರ ಸರ್ಕಾರವಿದ್ದು ಮುಂದಿನ ದಿನಗಳಲ್ಲೂ ವಿನೂತನ ಕಾರ್ಯಕ್ರಮಗಳ ಮೂಲಕ ಮತ್ತಷ್ಟು ಜನಮೆಚ್ಚುಗೆ ಪಡೆಯಲಿದೆ ಎಂದು ಪೌರಾಡಳಿತ ಮತ್ತು ಸಣ್ಣಕೈಗಾರಿಕೆ ಖಾತೆ ಸಚಿವ ಎಂಟಿಬಿ ನಾಗರಾಜ್ ಹೇಳಿದರು.


    ಜು.28ರಂದು ಹಮ್ಮಿಕೊಂಡಿರುವ ಸಿಎಂ ಸಾಧನ ಸಮಾವೇಶದ ಹಿನ್ನೆಲೆಯಲ್ಲಿ ಶುಕ್ರವಾರ ದೊಡ್ಡಬಳ್ಳಾಪುರ ತಾಲೂಕಿನ ರಘುವನಹಳ್ಳಿಯಲ್ಲಿ ಪೂರ್ವಸಿದ್ಧತೆ ಪರಿಶೀಲಿಸಿ ಮಾತನಾಡಿದರು.
    ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದ ಅವಧಿಯಲ್ಲಿ ನೀಡಿದ ಜನಪರ ಕಾರ್ಯಕ್ರಮಗಳು ಜನಮಾನಸದಲ್ಲಿ ಅಚ್ಚೊತ್ತಿವೆ, ಸುಭದ್ರ ಸರ್ಕಾರದೊಂದಿಗೆ ಬಲಿಷ್ಠ ಸಂಘಟನೆಗಳ ಮೂಲಕ ಉತ್ತಮ ನಾಯಕರೆನಿಸಿದ್ದಾರೆ. 28ಕ್ಕೆ ಬೊಮ್ಮಾಯಿ ಅವರು ಅಧಿಕಾರಕ್ಕೆ ಬಂದು 1 ವರ್ಷವಾಗಲಿರುವ ಹಿನ್ನೆಲೆಯಲ್ಲಿ ರಘುನಾಥಪುರದಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಲೆ ಇದೆ, ಮುಖ್ಯವಾಗಿ ಯುವಜನರು ಬಿಜೆಪಿಯತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಿಚ್ಛಳ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.

    ಜಿಲ್ಲೆಯಲ್ಲಿ ಸಂಘಟನೆ: ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಲಾಗಿದೆ. ಈಗಾಗಲೇ ಪಕ್ಷ ಸೇರ್ಪಡೆ ಪರ್ವ ಆರಂಭವಾಗಿದ್ದು, ವಿವಿಧ ಪಕ್ಷ ತೊರೆದು ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದ ಸಚಿವರು ಬಿಜೆಪಿ ತತ್ವಸಿದ್ಧಾಂತ ಮೆಚ್ಚಿ ಬರುವವರಿಗೆ ಪಕ್ಷಕ್ಕೆ ಸ್ವಾಗತವಿದೆ, ಸಂಘಟನೆ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಟಗೊಳಿಸಲು ಶ್ರಮಿಸಲಾಗುತ್ತಿದೆ ಎಂದರು.


    ಲಕ್ಷಾಂತರ ಜನ ನೀರಿಕ್ಷೆ: ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶಕ್ಕೆ ರಾಜ್ಯಾದ್ಯಂತ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ, ಮೂಲಸೌಕರ್ಯ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.


    ಅಪಾರ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಲಿದ್ದು, ಎಲ್ಲಿಯೂ ಲೋಪವಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.


    ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆಯುತ್ತಾ ಬಂದಿದೆ. ಕೋವಿಡ್‌ನಂಥ ರಾಷ್ಟ್ರೀಯ ವಿಪತ್ತನ್ನು ಕೇಂದ್ರ ಸರ್ಕಾರದ ಮಾರ್ಗದರ್ಶನ ಹಾಗೂ ಸಮನ್ವಯತೆಯಿಂದ ರಾಜ್ಯ ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ, ಕೋವಿಡ್ ಸಂದರ್ಭದಲ್ಲಿ ಎದುರಾದ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಿ ಇಡೀ ವ್ಯವಸ್ಥೆಯನ್ನು ಪುನಶ್ಚೇತನ ಮಾಡಲಾಗುತ್ತಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts