

Murdered : ಬೆಂಗಳೂರಿನ HSR ಲೇಔಟ್ನಲ್ಲಿರುವ ಮನೆಯೊಂದರಲ್ಲಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ(ಡಿಜಿ & ಐಜಿಪಿ) ಓಂ ಪ್ರಕಾಶ್(68) ಅವರ ಮೃತ ದೇಹ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವವಾಗಿದೆ. ಅವರ ದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.
2005ರಲ್ಲಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆರಿದ್ದ ಓಂ ಪ್ರಕಾಶ್, ರಾಜ್ಯದ 38ನೇ ಡಿಜಿ &ಐಜಿಪಿ ಆಗಿದ್ದರು. 1981ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. HSR ಲೇಔಟ್ನ ಮನೆಗೆ ಪೊಲೀಸ್ ಅಧಿಕಾರಿಗಳು ಮನೆಗೆ ತೆರಳಿದ್ದು, ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.