More

    ಬಂಗಾರಪೇಟೆ ತಹಸೀಲ್ದಾರ್ ಹತ್ಯೆಗೆ ಆಕ್ರೋಶ, ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ

    ಬಳ್ಳಾರಿ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಬೊಹಳ್ಳಿ, ಕೂಡ್ಲಿಗಿ, ಹೂವಿನಹಡಗಲಿ, ಕಂಪ್ಲಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

    ಜಮೀನು ಸರ್ವೇಗೆ ಹೋಗಿದ್ದ ತಹಸೀಲ್ದಾರ್‌ರನ್ನು ತೊಪ್ಪನಹಳ್ಳಿ ಗ್ರಾಮದ ವೆಂಕಟಪತಿ ಎಂಬಾತ ಚಾಕುವಿನಿಂದ ಹತ್ಯೆಗೈದಿದ್ದಾನೆ. ಸರ್ಕಾರ ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು. ಅವರ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು. ರಾಜ್ಯದಲ್ಲಿ ಕಠಿಣ ಕಾನೂನು ಇಲ್ಲದ್ದರಿಂದ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು, ಅಧಿಕಾರಿಗಳು ಭಯದ ವಾತಾವರಣದಲ್ಲಿಯೇ ಕೆಲಸ ಮಾಡಬೇಕಾಗಿದೆ. ಆದ್ದರಿಂದ ಅಧಿಕಾರಿಗಳಿಗೆ ಭದ್ರತೆ ಒದಗಿಸಬೇಕು. ಹಲ್ಲೆ, ಕೊಲೆಗೆ ಮುಂದಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಹಬೊಹಳ್ಳಿ, ಕೂಡ್ಲಿಗಿ, ಕಂಪ್ಲಿ, ಹೂವಿನಹಡಗಲಿ, ಕೊಟ್ಟೂರಿನಲ್ಲಿ ತಹಸೀಲ್ದಾರ್‌ಗಳಿಗೆ ಮನವಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts