

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬ ತನ್ನ ಬ್ಯಾಗ್ನೊಳಗೆ ಬರೋಬ್ಬರಿ 12 ಹೆಬ್ಬಾವುಗಳನ್ನು ಬಚ್ಚಿಟ್ಟಿದ್ದನ್ನು ಪತ್ತೆಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು, ಆತನನ್ನು ಬಂಧಿಸುವುದರ ಜತೆಗೆ ಹೆಬ್ಬಾವುಗಳನ್ನು ವಶಪಡಿಸಿಕೊಂಡ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ವರದಿಯಾಗಿದೆ.
ಏರ್ಪೋರ್ಟ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನನ್ನು ತಡೆದು ಕೆಲ ಕಾಲ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿ ತಂದಿದ್ದ ಹಲವು ಬ್ಯಾಗ್ಗಳನ್ನು ತೆರೆದ ಅಧಿಕಾರಿಗಳು, 11 ಬಾಲ್ ಹೆಬ್ಬಾವು ಮತ್ತು 1 ಬಿಳಿ ಲಿಪ್ಡ್ ಹೆಬ್ಬಾವನ್ನು ವಶಪಡಿಸಿಕೊಂಡಿದ್ದಾರೆ.
ಒಟ್ಟು 12 ಹೆಬ್ಬಾವುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು, ವ್ಯಕ್ತಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಕಸ್ಟಮ್ಸ್ ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ. ಬಾಲ್ ಹೆಬ್ಬಾವುಗಳನ್ನು ಅಳಿವಿನಂಚಿನಲ್ಲಿರುವ ಪ್ರಭೇದವೆಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).